ಬೆಂಗಳೂರು: ‘ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆ ಎಂದಿದ್ದಾರೆ. ಮುಂದಿನ ಜನ್ಮದವರೆಗೆ ಕಾಯವುದು ಬೇಡ, ಈ ಜನ್ಮದಲ್ಲಿಯೇ ಮತಾಂತರವಾಗಿಬಿಡಲಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಮದ್ದೂರು ಚಲೋಗೂ ಮುನ್ನ ಇಲ್ಲಿ ಅವರು ಸುದ್ದಿಗಾರರ ಜತೆ ಮಾತನಾಡಿದರು. ‘ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರು ಮುಸ್ಲಿಮನಾಗಿ ಹುಟ್ಟಲು ಬಯಸುತ್ತೇನೆ’ ಎಂದು ಹೇಳಿರುವ ಬಗ್ಗೆ ಸುದ್ದಿಗಾರರು ಪ್ರತಿಕ್ರಿಯೆ ಕೇಳಿದಾಗ ವಿಜಯೇಂದ್ರ ಮೇಲಿನಂತೆ ಪ್ರತಿಕ್ರಿಯಿಸಿದರು.

‘ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದಲೇ ಹಿಂದೂಗಳ ಮೇಲೆ ಕಲ್ಲು ತೂರಾಟ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಯುತ್ತಿದೆ. ಅಂತಹ ದುಷ್ಟಶಕ್ತಿಗಳಿಗೆ ಪೂರಕವಾದ ವಾತಾವರಣವನ್ನು ರಾಜ್ಯ ಸರ್ಕಾರ ನಿರ್ಮಿಸಿದೆ. ಕಾಂಗ್ರೆಸ್ ನಾಯಕರ ಇಂತಹ ಮಾತುಗಳೂ ದಾಳಿಕೋರರಿಗೆ ಪ್ರಚೋದನೆ ನೀಡುತ್ತದೆ’ ಎಂದರು.

‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳು ಗಣೇಶನ ಹಬ್ಬವನ್ನು ನೆಮ್ಮದಿಯಿಂದ ಆಚರಿಸಲು ಸಾಧ್ಯವಾಗಿಲ್ಲ. ಸರ್ಕಾರವು ಒಂದು ಸಮುದಾಯದ ಕಡೆ ವಾಲಿದೆ. ಧರ್ಮಸ್ಥಳದ ವಿಚಾರ, ಚಾಮುಂಡಿ ಬೆಟ್ಟ, ನಿನ್ನೆ ಮದ್ದೂರಿನ ಘಟನೆಗಳು ಇದನ್ನು ಸಾಬೀತುಪಡಿಸುವಂತಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.