ಬೆಂಗಳೂರು: ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೀಡಿರುವ ನೋಟಿಸ್ಗೆ ಉತ್ತರ ಕಳುಹಿಸಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಹುದ್ದೆಗೆ ಸಮರ್ಥರನ್ನು ಆಯ್ಕೆ ಮಾಡಬೇಕು ಎಂದಿದ್ದಾರೆ.

ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ನೀಡಿದ್ದರ ಸಂಬಂಧ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು ಯತ್ನಾಳ ಅವರಿಗೆ ಇದೇ 10ರಂದು ನೋಟಿಸ್ ನೀಡಿತ್ತು. 72 ಗಂಟೆಗಳಲ್ಲಿ ಉತ್ತರ ನೀಡುವಂತೆ ಸೂಚಿಸಿತ್ತು. ನೋಟಿಸ್ ದೊರೆತ ಮರುದಿನವೇ ಅವರು ಐದು ಪುಟಗಳಷ್ಟು ವಿವರವಾದ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ನಾನು ಯಾವುದೇ ಬಣ ರಾಜಕಾರಣ ಮಾಡಿಲ್ಲ. ಪಕ್ಷದ ಚೌಕಟ್ಟಿನಲ್ಲೇ ವಕ್ಫ್ ಹೋರಾಟ ನಡೆಸಿದ್ದೇವೆ. ಪಕ್ಷಕ್ಕೆ ಧಕ್ಕೆಯಾಗುವಂತಹ ಯಾವ ಕೆಲಸವನ್ನೂ ಮಾಡಿಲ್ಲ ಎಂದು ಉತ್ತರಿಸಿದ್ದಾರೆ’ ಎಂದು ತಿಳಿಸಿವೆ.

‘ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸ್ವಜನ ಪಕ್ಷಪಾತ ಮಾಡುತ್ತಿದ್ದಾರೆ. ಹಿರಿಯರನ್ನು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಈ ಕಾರಣದಿಂದ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಕುಟುಂಬ ರಾಜಕಾರಣ ಮತ್ತು ಸ್ವಜನಪಕ್ಷಪಾತ ಕೊನೆಗೊಳ್ಳಬೇಕು ಎಂದು ಯತ್ನಾಳ ಪ್ರತಿಪಾದಿಸಿದ್ದಾರೆ’ ಎಂದು ತಿಳಿಸಿವೆ.

‘ರಾಜ್ಯ ಸರ್ಕಾರವು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ. ಮುಖ್ಯಮಂತ್ರಿ ವಿರುದ್ಧ ಮುಡಾ ಹಗರಣ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಬುಡಕಟ್ಟುಗಳ ಅಭಿವೃದ್ಧ ನಿಗಮದ ಹಣ ದುರ್ಬಳಕೆ, ವಕ್ಫ್ ಪಹಣಿಗಳ ಬದಲಾವಣೆ, ರೈತರು–ಅಧಿಕಾರಿಗಳು ಮತ್ತು ಗುತ್ತಿಗೆದಾರರ ಆತ್ಮಹತ್ಯೆಗಳಂತಹ ಹೋರಾಟದ ಅವಕಾಶಗಳು ದೊರೆತಿದ್ದವು. ಆದರೆ ರಾಜ್ಯಾಧ್ಯಕ್ಷರ ಅಸಮರ್ಥತೆ ಕಾರಣದಿಂದ ಈ ಎಲ್ಲ ಹೋರಾಟಗಳಲ್ಲಿ ಪಕ್ಷವು ವಿಫಲವಾಗಿದೆ ಎಂದು ದೂರಿದ್ದಾರೆ’ ಎಂದಿವೆ.

‘ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಪಕ್ಷವನ್ನು ಬಲಪಡಿಸಲು ಈಗಲೇ ಅಧ್ಯಕ್ಷರನ್ನು ಬದಲಿಸಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸುವವರಿಗೆ ಆ ಹೊಣೆಗಾರಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.