ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗ್ರಾಮಾಡಳಿತ ಅಧಿಕಾರಿ ಹುದ್ದೆ: ಮತ್ತೆ ಅರ್ಜಿ ಸಲ್ಲಿಕೆಗೆ ಅವಕಾಶ

Published : 17 ಸೆಪ್ಟೆಂಬರ್ 2024, 15:44 IST
Last Updated : 17 ಸೆಪ್ಟೆಂಬರ್ 2024, 15:44 IST
ಫಾಲೋ ಮಾಡಿ
Comments

ಪ್ರಜಾವಾಣಿ ವಾರ್ತೆ

ಬೆಂಗಳೂರು: ಗ್ರಾಮಾಡಳಿತ ಅಧಿಕಾರಿ ಹಾಗೂ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳಲ್ಲಿನ (ಜಿಟಿಟಿಸಿ) ಖಾಲಿ ಹುದ್ದೆಗಳಿಗೆc ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೆ ಅವಕಾಶ ನೀಡಿದೆ.

‘ಬಿ’ ಮತ್ತು‌ ‘ಸಿ’ ವರ್ಗದ ಹುದ್ದೆಗಳ ನೇಮಕಕ್ಕೆ ಅರ್ಜಿ ಸಲ್ಲಿಸಲು ಸರ್ಕಾರ ಒಂದು ಬಾರಿಗೆ ಮಾತ್ರ ಗರಿಷ್ಠ ಮೂರು ವರ್ಷ ವಯೋಮಿತಿ ಸಡಿಲ ಮಾಡಿದೆ. ಹಾಗಾಗಿ, ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ದೊರೆತಿದೆ.

ವಯೋಮಿತಿ ಸಡಿಲಿಕೆ ಲಾಭ ಪಡೆಯುವವರೂ ಸೇರಿ ಇತರರೂ ಅರ್ಜಿ ಸಲ್ಲಿಸಬಹುದು. ಸೆ.28 ಅರ್ಜಿ ಸಲ್ಲಿಕೆಗೆ ಕೊನೆಯ ದಿನ. ಸೆ.29ರ ಒಳಗೆ ಶುಲ್ಕ ಪಾವತಿಸಬೇಕು. ಹಿಂದೆ ಅರ್ಜಿ ಸಲ್ಲಿಸಿದವರು ಮತ್ತೆ ಸಲ್ಲಿಸುವ ಅಗತ್ಯವಿಲ್ಲ ಎಂದು ಕೆಇಎ ಹೇಳಿದೆ.

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗಳಿಗೆ (ಪಿಎಸ್ಐ) ಅ.3ರಂದು ಪರೀಕ್ಷೆ ನಡೆಯಲಿದೆ. ಕೆ-ಸೆಟ್‌  ಮತ್ತು ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನ.24ರಂದು ಪ್ರತ್ಯೇಕ ಪರೀಕ್ಷೆಗಳು ನಡೆಯಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT