ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಧಿಕಾರಿಗಳಿಗೆ ಹಳ್ಳಿ ಪ್ರವಾಸ ಕಡ್ಡಾಯ: ಪ್ರಿಯಾಂಕ್‌ ಖರ್ಗೆ

Published 19 ಜೂನ್ 2024, 15:40 IST
Last Updated 19 ಜೂನ್ 2024, 15:40 IST
ಅಕ್ಷರ ಗಾತ್ರ

ಬೆಂಗಳೂರು: ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣಗಳನ್ನು ತಡೆಯಲು ಅಧಿಕಾರಿಗಳು ವಾರದ ಒಂದು ದಿನ ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು.

ವಿಕಾಸಸೌಧದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲ್ಲೂಕುಮಟ್ಟದಲ್ಲಿ  ಪ್ರವಾಸ ಮಾಡಬೇಕು. ನೀರು ಸರಬರಾಜು ವ್ಯವಸ್ಥೆ ಪರಿಶೀಲನೆ ಮಾಡಿದ ನಂತರ ಪ್ರತಿ ವಾರ ಆಯುಕ್ತರಿಗೆ ವರದಿ ಸಲ್ಲಿಸಬೇಕು. ಪ್ರತಿ ತಿಂಗಳ 2ನೇ ತಾರೀಕು ವಿಡಿಯೊ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

‌ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಮಳೆಯ ನೀರಿನ ಜೊತೆ ಕಲ್ಮಶ ಕುಡಿಯುವ ನೀರಿನ ಜೊತೆ ಮಿಶ್ರಣವಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು. ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ನೀರಿನ ಗುಣಮಟ್ಟ ಪರೀಕ್ಷೆಯ ತರಬೇತಿ ನೀಡಬೇಕು ಎಂದು ಸೂಚಿಸಿದರು.  

ಜಲಜೀವನ ಮಿಷನ್‌ ಹಾಗೂ ಬಹುಗ್ರಾಮ ಯೋಜನೆ ವಿಳಂಬ ಮಾಡುತ್ತಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT