ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಲಾ ಪೈ ವಿಶ್ವ ಕೊಂಕಣಿ ಪುರಸ್ಕಾರ ಪ್ರಕಟ

Last Updated 28 ಡಿಸೆಂಬರ್ 2021, 17:33 IST
ಅಕ್ಷರ ಗಾತ್ರ

ಮಂಗಳೂರು: ನಗರದ ವಿಶ್ವ ಕೊಂಕಣಿ ಕೇಂದ್ರವು ಕೊಡಮಾಡುವ ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ 2021, ವಿಮಲಾ ವಿ. ಪೈ ವಿಶ್ವ ಕೊಂಕಣಿ ಕವಿತಾ ಕೃತಿ ಪುರಸ್ಕಾರ 2021 ಮತ್ತು ವಿಮಲಾ ವಿ. ಪೈ ವಿಶ್ವ ಕೊಂಕಣಿ ಜೀವನ ಸಿದ್ಧಿ ಸಮ್ಮಾನಗಳನ್ನು ಪ್ರಕಟಿಸಲಾಗಿದೆ.

ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರಕ್ಕೆ ನಗರದ ಆಂಟನಿ ಬಾರ್ಕೂರ್ ರಚಿಸಿದ ಕೊಂಕಣಿ ಸಣ್ಣ ಕತೆಗಳ ಸಂಕಲನ ‘ಮಾಸಾಂ’, ವಿಶ್ವ ಕೊಂಕಣಿ ಕವಿತಾ ಕೃತಿ ಪುರಸ್ಕಾರಕ್ಕೆ ಗೋವಾದ ಉದಯ ನರಸಿಂಹ ಮ್ಹಾಂಬ್ರೋ ರಚಿಸಿದ ಕವಿತಾ ಸಂಕಲನ ‘ಇಂದ್ರಧೊಣು ಉದೆಂವ್’ ಆಯ್ಕೆಯಾಗಿವೆ.

ಹಿರಿಯರನ್ನು ಗೌರವಿಸಲು ಸ್ಥಾಪಿಸಲಾದ ವಿಮಲಾ ವಿ. ಪೈ ವಿಶ್ವ ಕೊಂಕಣಿ ಜೀವನ ಸಿದ್ಧಿ ಸಮ್ಮಾನಕ್ಕೆ ಗೋವಾದ ಸುರೇಶ ಜೈವಂತ ಬೋರ್ಕರ್ ಅವರನ್ನು ಆಯ್ಕೆ ಮಾಡಲಾಗಿದೆ. ಪುರಸ್ಕಾ
ರಗಳು ತಲಾ ₹1 ಲಕ್ಷ ಗೌರವಧನ ಮತ್ತು ಫಲಕವನ್ನು ಒಳಗೊಂಡಿವೆ. ಈ ಪ್ರಶಸ್ತಿಗಳನ್ನು ಟಿ.ವಿ. ಮೋಹನದಾಸ ಪೈಯವರು ತಮ್ಮ ತಾಯಿ ವಿಮಲಾ ವಿ. ಪೈ ಅವರ ಹೆಸರಿನಲ್ಲಿ ಪ್ರಾಯೋಜಿಸಿದ್ದಾರೆ. ಶೀಘ್ರದಲ್ಲೇ ಜರುಗಲಿರುವ ವಾರ್ಷಿಕ ವಿಶ್ವ ಕೊಂಕಣಿ ಪುರಸ್ಕಾರ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ನಂದಗೋಪಾಲ ಶೆಣೈ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT