ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ಗೌಡ ಗೌಡರ್ ಕೊಲೆ ಪ್ರಕರಣದ ಅಪರಾಧಿಯಾಗಿರುವ, ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸೇರಿದಂತೆ ಪ್ರಕರಣದ ಒಟ್ಟು 16 ಜನ ತಪ್ಪಿತಸ್ಥರಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ಜೀವಾವಧಿ ಮತ್ತು ಇನ್ನೊಬ್ಬ ಅಪರಾಧಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಇದ್ದ ಒಟ್ಟು 21 ಅಪರಾಧಿಗಳಲ್ಲಿ ವಿನಯ ಕುಲಕರ್ಣಿ ಸೇರಿದಂತೆ 17 ಆರೋಪಿಗಳನ್ನು ಅಪರಾಧಿಗಳು ಎಂದು ತೀರ್ಮಾನಿಸಿದ್ದ , ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ನ್ಯಾಯಾಲಯದ ಶುಕ್ರವಾರ ಸಂಜೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿತು. ಜೀವಾವಧಿ ಒಳಗಾಗಿರುವ ವಿನಯ ಕುಲಕರ್ಣಿ ಅವರು, ಜನಪ್ರತಿನಿಧಿ ಕಾಯ್ದೆ 1951ರ ಅನ್ವಯ, ತಕ್ಷಣದಿಂದಲೇ ತಮ್ಮ ಶಾಸಕ ಸ್ಥಾನದಿಂದ ಅನರ್ಹಗೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.