ಮಂಗಳೂರು: ‘ಶಾಸಕ ವಿನಯ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಕುರಿತು ನ್ಯಾಯಾಲಯದಿಂದ ಈ ವರೆಗೆ ನಮ್ಮ ಕಚೇರಿಗೆ ಅಧಿಕೃತ ಆದೇಶ ಬಂದಿಲ್ಲ. ಆದೇಶ ಬಂದ ನಂತರ ಮುಂದಿನ ಕ್ರಮದ ಬಗ್ಗೆ ಯೋಚಿಸಲಾಗುವುದು' ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಯಾವ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಲು ಹೊರಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲ’ ಎಂದರು.

‘ಆದರೆ, ಯಾವುದೇ ಕಾನೂನು ರೂಪಿಸುವಾಗ ಎಲ್ಲ ಪ್ರದೇಶ, ಜಾತಿ, ವರ್ಗ, ಧರ್ಮದವರನ್ನು ವಿಶ್ವಾಸಕ್ಕೆ ಪಡೆದು, ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಬೇಕಾಗುತ್ತದೆ’ ಎಂದು ಹೇಳಿದರು.

ಸಮಿತಿ ಸಭೆ: ಪಕ್ಷಾಂತರ ನಿಷೇಧ ಕಾಯ್ದೆ ಬಲಪಡಿಸುವ ನಿಟ್ಟಿನಲ್ಲಿ ರಚನೆಯಾಗಿರುವ ಪರಿಶೀಲನಾ ಸಮಿತಿಯ ಸಭೆಯು ಒಡಿಶಾದ ಭುವನೇಶ್ವರದಲ್ಲಿ ಇದೇ 22 ಮತ್ತು23ರಂದು ನಡೆಯಲಿದೆ. ಕರ್ನಾಟಕ,ಮಹಾರಾಷ್ಟ್ರ, ಒಡಿಶಾ, ನಾಗಾಲ್ಯಾಂಡ್, ಸಿಕ್ಕಿಂ ರಾಜ್ಯಗಳ ಸ್ಪೀಕರ್ಗಳು, ಹಿರಿಯ ವಕೀಲರು ಭಾಗವಹಿಸಲಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ರಚಿಸಿರುವ ಈ ಸಮಿತಿ ಈಗಾಗಲೇ ಒಂದು ಸಭೆ ನಡೆಸಿದ್ದು, ಇನ್ನು ಒಂದು ವರ್ಷದ ಒಳಗಾಗಿ ವರದಿ ಸಲ್ಲಿಸಲಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-51-520856690

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.