ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭೆಗಳಿಗೆ ಆಂಗ್ಲೋ ಇಂಡಿಯನ್‌ ಪ್ರಾತಿನಿಧ್ಯ ರದ್ದು: ವಿನಿಷಾ ಬೇಸರ

Last Updated 22 ಫೆಬ್ರುವರಿ 2023, 22:30 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಗಳಿಗೆ ಆಂಗ್ಲೋ ಇಂಡಿಯನ್‌ ಸಮುದಾಯದವರನ್ನು ನಾಮನಿರ್ದೇಶನ ಮಾಡುವ ನಿಯಮ ರದ್ದು ಮಾಡಿರುವ ಕೇಂದ್ರ ಸರ್ಕಾರದ ಕ್ರಮದ ಬಗ್ಗೆ ವಿಧಾನಸಭೆಯಲ್ಲಿ ವಿನಿಷಾ ನಿರೋ ಅವರು ತೀವ್ರ ಅಸಮಾಧಾನ
ವ್ಯಕ್ತಪಡಿಸಿದರು.

ವಿಧಾನಸಭೆಯಲ್ಲಿ ಬುಧವಾರ ಬಜೆಟ್‌ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುವಾಗ ಅವರು ಈ ವಿಷಯ ಪ್ರಸ್ತಾಪಿಸಿದರು. ವಿಧಾನಸಭೆಗೆ ನಾಮನಿರ್ದೇಶನಗೊಂಡಿದ್ದ ವಿನಿಷಾ ಅವರ ಅವಧಿ ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಾಮನಿರ್ದೇಶನ ಮುಂದುವರಿಸುವಂತೆ ಮನವಿ ಮಾಡಿದರು.

‘ದೇಶದಲ್ಲಿ ನಮ್ಮ ಸಮುದಾಯದವರು ಕಡಿಮೆ ಇದ್ದರೂ ಈ ದೇಶಕ್ಕಾಗಿ ಅಪಾರ ಸೇವೆ ಮಾಡಿದ್ದಾರೆ. ಸೇನೆ, ಅಂಚೆ ಮತ್ತು ದೂರಸಂಪರ್ಕ ಇಲಾಖೆ, ಶಿಕ್ಷಣ ಇನ್ನಿತರ ಕ್ಷೇತ್ರಗಳಲ್ಲಿ ಕೊಡುಗೆ ನೀಡಿದ್ದಾರೆ. ನಮ್ಮ ಸಂಖ್ಯೆ ಕಡಿಮೆ ಇರುವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೂ ಆಗುವುದಿಲ್ಲ. ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಪುನರ್‌ ಪರಿಶೀಲಿಸಬೇಕು’ ಎಂದು ಒತ್ತಾಯಿಸಿದರು.

ಈ ಬಾರಿಯ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಈ ಸಮುದಾಯದ ಅಭಿವೃದ್ಧಿಗೆ ಕನಿಷ್ಠ ₹200 ಕೋಟಿ ನೀಡಬೇಕು. ಬಜೆಟ್‌ನಲ್ಲಿ ಮುಧೋಳ್ ನಾಯಿಯ ಪ್ರಸ್ತಾಪ ಮಾಡಿದ್ದಾರೆ. ಆದರೆ, ಕ್ರೈಸ್ತರ ಕುರಿತು ಉಲ್ಲೇಖವೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ವಿಧಾನಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯ ಇನ್ನಷ್ಟು ಹೆಚ್ಚಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT