ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಿ.ಟಿ.ರವಿ ವಿರುದ್ಧದ ಪ್ರಕರಣಕ್ಕೆ ತಡೆ

Published : 26 ಸೆಪ್ಟೆಂಬರ್ 2024, 16:26 IST
Last Updated : 26 ಸೆಪ್ಟೆಂಬರ್ 2024, 16:26 IST
ಫಾಲೋ ಮಾಡಿ
Comments

ಬೆಂಗಳೂರು: ‘ಸಮಾಜದಲ್ಲಿ ಧಾರ್ಮಿಕ ದ್ವೇಷ ಹರಡಲು ಪ್ರಯತ್ನಿಸಿದ ಮತ್ತು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ’ ಎಂಬ ಆರೋಪದಡಿ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧದ ವಿಚಾರಣಾ ನ್ಯಾಯಾಲಯದಲ್ಲಿನ ಕ್ರಿಮಿನಲ್‌ ಪ್ರಕರಣಕ್ಕೆ ಹೈಕೋರ್ಟ್‌ ತಡೆ ನೀಡಿದೆ.

‘ಪ್ರಕರಣ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯಗಳ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದರು.

ಎರಡೂ ಅರ್ಜಿಗಳಲ್ಲಿ ಪ್ರತಿವಾದಿಗಳಾಗಿರುವ ಚಿಕ್ಕಮಗಳೂರು ಟೌನ್‌ ಮತ್ತು ಬಸವನಹಳ್ಳಿ ಠಾಣಾ ಪೊಲೀಸರು, ಚುನಾವಣಾ ಅಧಿಕಾರಿಗಳಾಗಿದ್ದ ಜಯಲಕ್ಷ್ಮಮ್ಮ ಮತ್ತು ದೀಪಕ್‌ ಅರವಿಂದ ಗರಗ ಅವರಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT