ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಎಚ್‌ಡಿಕೆ ವಿರುದ್ಧ ಪ್ರಕರಣ

Published 21 ಏಪ್ರಿಲ್ 2024, 5:24 IST
Last Updated 21 ಏಪ್ರಿಲ್ 2024, 5:24 IST
ಅಕ್ಷರ ಗಾತ್ರ

ತುಮಕೂರು: ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯಡಿ ಗುಬ್ಬಿ ಪೊಲೀಸ್‌ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.

ಏ.14ರಂದು ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕುಮಾರಸ್ವಾಮಿ ಅವರು  ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಅವರನ್ನು ಟೀಕಿಸಿದ್ದರು.

‘ಡಿ.ಕೆ.ಸುರೇಶ್‌ ಎಲ್ಲಿಂದ ಬಂದಿರುವರು? ಕೊತ್ವಾಲ್‌ ರಾಮಚಂದ್ರ ಗರಡಿಯಿಂದ ಬಂದವರು. ದೇಶ ಮತ್ತು ರಾಜ್ಯವನ್ನು ಉಳಿಸುತ್ತಾರಾ? ಹಣದ ದಾಹಕ್ಕೆ ಏನು ಬೇಕಾದರೂ ಮಾಡುತ್ತಾರೆ’ ಎಂದು ಕುಮಾರಸ್ವಾಮಿ ಹೇಳಿದ್ದರು.

ಈ ಸಭೆಯಲ್ಲಿ ಹಾಜರಿದ್ದ ಚುನಾವಣೆಯ ಎಫ್‌ಎಸ್‌ಟಿ ತಂಡದ ಅಧಿಕಾರಿ ಡಿ.ಎಚ್‌.ಮಹೇಶ್‌ ನೀಡಿದ ದೂರು ನೀಡಿದ್ದರು. ದೂರು ದಾಖಲಿಸಿಕೊಳ್ಳಲು ನಿರ್ದೇಶನ ನೀಡುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಕೋರ್ಟ್ ಆದೇಶದ ಮೇರೆಗೆ ದೂರು ದಾಖಲಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT