ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಚಾರ ನಿಯಮ ಉಲ್ಲಂಘನೆ: ರಿಯಾಯತಿ ಅವಧಿ ವಿಸ್ತರಣೆಗೆ ಕೋರಿಕೆ

Last Updated 15 ಫೆಬ್ರುವರಿ 2023, 2:53 IST
ಅಕ್ಷರ ಗಾತ್ರ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗಾಗಿ ವಾಹನ ಸವಾರರಿಗೆ ವಿಧಿಸಲಾಗಿದ್ದ ದಂಡದ ಮೊತ್ತದಲ್ಲಿ ಶೇ50ರಷ್ಟು ರಿಯಾಯಿತಿ ನೀಡುವುದನ್ನು 15 ದಿನಗಳ ಕಾಲ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ಧರಿಸಿದೆ.

ಹೈಕೋರ್ಟ್‌ನ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆದ ನ್ಯಾಯಯೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ನಗರದ ವಿಶೇಷ ಪೊಲೀಸ್ ಆಯುಕ್ತ (ಸಂಚಾರ) ಡಾ.ಎಂ.ಎ. ಸಲೀಂ, "ಟ್ರಾಫಿಕ್ ಫೈನ್ ಪಾವತಿ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿ ನೀಡುವುದನ್ನು ಇನ್ನೂ 15 ದಿನಗಳ ಕಾಲ ವಿಸ್ತರಿಸಬೇಕು. ಈ ಕುರಿತು ಸಾರ್ವಜನಿಕರ ಬೇಡಿಕೆಯಿದೆ" ಎಂದು ಸಭೆಯಲ್ಲಿ ಮನವಿ ಮಾಡಿದರು.

ವಿಶೇಷ ಆಯುಕ್ತರ ಮತ್ತು ಸಾರ್ವಜನಿಕರ ಬೇಡಿಕೆಯನ್ನು ಪರಿಗಣಿಸಿ, ಟ್ರಾಫಿಕ್ ಫೈನ್ ಪ್ರಕರಣದಲ್ಲಿ ಶೇ50ರಷ್ಟು ರಿಯಾಯಿತಿ ನೀಡುವುದನ್ನು 15 ಕಾಲ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಕಾನೂನು ಸೇವೆಗಳ ಪ್ರಾಧಿಕಾರ ತೀರ್ಮಾನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT