‘ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ) ಮಾಹಿತಿ ಪ್ರಕಾರ 2021ರ ನಂತರ ಪರಿಶಿಷ್ಟ ಜಾತಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಶೇ 13.1 ರಷ್ಟು ಹೆಚ್ಚಾಗಿದೆ. ಸ್ವತಂತ್ರ ಭಾರತದಲ್ಲಿ ದಲಿತರು, ಹಿಂದುಳಿದವರು ಹಾಗೂ ಶೋಷಿತರ ಮೇಲೆ ನಡೆಯುವ ದೌರ್ಜನ್ಯಗಳು ಕಡಿಮೆಯಾಗುವ ಬದಲು, ಹೆಚ್ಚಾಗುತ್ತಿದೆ. ಎನ್‌ಸಿಆರ್‌ಬಿ ಪ್ರಕಾರ ದೇಶದಲ್ಲಿ ಪ್ರತಿನಿತ್ಯ ಹತ್ತು ದಲಿತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರಗಳು ನಡೆಯುತ್ತಿದೆ. ಅದೆಷ್ಟೋ ಪ್ರಕರಣಗಳ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.