ಬೆಂಗಳೂರು: ‘ತಮಗೆ ನೀಡಿರುವ ವೀಸಾ ಅವಧಿಯನ್ನು ವಿಸ್ತರಿಸಲು ನಿರ್ದೇಶಿಸಬೇಕು’ ಎಂದು ಕೋರಿ; ಭಾರತೀಯ ತಾಯಿ ಮತ್ತು ಪಾಕಿಸ್ತಾನದ ತಂದೆಗೆ ಜನಿಸಿದ ಮೂರು ಪುಟ್ಟ ಮಕ್ಕಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಪಾಕಿಸ್ತಾನಕ್ಕೆ ಮರಳಲು ಸಾಧ್ಯವಾಗದ ಕಾರಣದಿಂದ ಬೀಬಿ ಯಾಮಿನಾ (8), ಮಹಮೂದ್ ಮುದಸ್ಸರ್ (4) ಮತ್ತು ಮಹಮೂದ್ ಯೂಸುಫ್ (3) ಪರ ಅವರ ತಾಯಿ ರಾಂಶ ಜಹಾನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ರಜಾಕಾಲದ ಏಕಸದಸ್ಯ ನ್ಯಾಯಪೀಠದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರು ಗುರುವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಕೇಂದ್ರ ಗೃಹ ಸಚಿವಾಲಯದ ಪರ ಡೆಪ್ಯುಟಿ ಸಾಲಿಸಿಟರ್ ಜನರಲ್ ಎಚ್. ಶಾಂತಿಭೂಷಣ್ ಅವರ ವಾದ ಮನ್ನಿಸಿದ ನ್ಯಾಯಪೀಠ, ‘ಅರ್ಜಿದಾರರ ಮನವಿಯನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ಹೇಳಿತು.

‘ಉಗ್ರರು ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಭಯಾನಕ ದಾಳಿ ನಡೆಸಿದ್ದಾರೆ. ಇದರಿಂದ ಕೇಂದ್ರ ಸರ್ಕಾರದ ಸಂಪುಟ ಸಮಿತಿಯು, ವಿಸಿಟರ್ ವೀಸಾ ಸೇರಿದಂತೆ ಎಲ್ಲಾ ರೀತಿಯ ವೀಸಾಗಳನ್ನು ಅಮಾನತುಪಡಿಸಿದೆ. ಅಂತೆಯೇ, ಭಾರತದಲ್ಲಿರುವ ಪಾಕಿಸ್ತಾನದ ಪ್ರಜೆಗಳು ಏಪ್ರಿಲ್ 27ರೊಳಗೆ ದೇಶಬಿಟ್ಟು ತೆರಳುವಂತೆ ಸೂಚನೆ ನೀಡಿದೆ. ದೇಶದ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಕೇಂದ್ರ ಸಂಪುಟ ಸಮಿತಿ ಈ ಆದೇಶ ಮಾಡಿದೆ. ಇದರಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡುವುದಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿಯನ್ನು ವಜಾಗೊಳಿಸಿ ನ್ಯಾಯಪೀಠ ಆದೇಶಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.