ಬೆಂಗಳೂರು: ವಿಶಾಖಪಟ್ಟಣ ಮತ್ತು ಎಸ್ಎಂವಿಟಿ ಬೆಂಗಳೂರು ನಡುವೆ ಸಂಚರಿಸುತ್ತಿದ್ದ ವಿಶೇಷ ರೈಲನ್ನು ಪೂರ್ವ ಕರಾವಳಿ ರೈಲ್ವೆಯು ಕಾಯಂಗೊಳಿಸಿದೆ. ಈ ಸಂಚಾರವು ಮೇ 10ರಂದು ವಿಶಾಖಪಟ್ಟಣದಿಂದ, ಮೇ 11ರಂದು ಬೆಂಗಳೂರಿನಿಂದ ಜಾರಿಗೆ ಬರಲಿದೆ.

ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲಾಗಿ ಇದು ಕಾರ್ಯನಿರ್ವಹಿಸಲಿದ್ದು, ಪ್ರತಿ ಭಾನುವಾರ ಮಧ್ಯಾಹ್ನ 3.20ಕ್ಕೆ ವಿಶಾಖಪಟ್ಟಣದಿಂದ ಹೊರಟು ಮರುದಿನ ಮಧ್ಯಾಹ್ನ 1.50ಕ್ಕೆ ಎಸ್ಎಂವಿಟಿಗೆ ತಲುಪಲಿದೆ. ಬೆಂಗಳೂರಿನಿಂದ ಪ್ರತಿ ಸೋಮವಾರ ಮಧ್ಯಾಹ್ನ 3.50ಕ್ಕೆ ಹೊರಟು ಮರುದಿನ ಮಧ್ಯಾಹ್ನ 1.30ಕ್ಕೆ ವಿಶಾಖಪಟ್ಟಣ ತಲುಪಲಿದೆ.

18 ಬೋಗಿಗಳ ಈ ರೈಲು ಈ ಹಿಂದೆ ವಿಶೇಷ ರೈಲಿಗೆ ಸೂಚಿಸಲಾಗಿದ್ದ ನಿಲುಗಡೆಗಳು ಮತ್ತು ವೇಳಾಪಟ್ಟಿಯಂತೆಯೇ ಸಂಚರಿಸಲಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಾರ್ಗ ಬದಲಾವಣೆ: ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಹಿರೇಹಳ್ಳಿ ಯಾರ್ಡ್ನಲ್ಲಿ ಸುರಕ್ಷತಾ ಮತ್ತು ಸಿಗ್ನಲಿಂಗ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ, ಮೇ19 ಮತ್ತು 20ರಂದು ವಿವಿಧ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಮೇ 20ರಂದು ಯಶವಂತಪುರ–ಶಿವಮೊಗ್ಗ ಟೌನ್ ದೈನಂದಿನ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲು ಯಶವಂತಪುರ, ಚಿಕ್ಕಬಾಣಾವರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುವುದಿಲ್ಲ.

ಮೇ 20ರಂದು ಮೈಸೂರು–ಬೆಳಗಾವಿ ವಿಶ್ವಮಾನವ ದೈನಂದಿನ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲು ಮೈಸೂರು, ಹೊಳೆನರಸೀಪುರ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಮೇ 20 ರಂದು ಕೆಎಸ್ಆರ್ ಬೆಂಗಳೂರು–ತುಮಕೂರು ಮೆಮು ರೈಲು ದೊಡ್ಡಬೆಲೆ ಮತ್ತು ತುಮಕೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ರೈಲು ದೊಡ್ಡಬೆಲೆಯಲ್ಲಿ ಕೊನೆಗೊಳ್ಳಲಿದೆ.

ಮೇ 20ರಂದು ತುಮಕೂರು–ಕೆಎಸ್ಆರ್ ಬೆಂಗಳೂರು ಮೆಮು ರೈಲು ತುಮಕೂರು ಮತ್ತು ದೊಡ್ಡಬೆಲೆ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ತುಮಕೂರಿನ ಬದಲಾಗಿ ದೊಡ್ಡಬೆಲೆ ನಿಲ್ದಾಣದಿಂದ ನಿಗದಿತ ಸಮಯಕ್ಕೆ ತನ್ನ ಪ್ರಯಾಣ ಆರಂಭಿಸಲಿದೆ.

ಮೇ 19ರಂದು ವೇಲಂಕಣಿ–ವಾಸ್ಕೊ ಡ ಗಾಮ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು ಮಾರ್ಗ ಮಧ್ಯೆ 60 ನಿಮಿಷ ನಿಲುಗಡೆ ಮಾಡುವುದರಿಂದ ವಿಳಂಬವಾಗಿ ಸಂಚರಿಸಲಿದೆ. ಮೇ 20ರಂದು ಕೆಎಸ್ಆರ್ ಬೆಂಗಳೂರು–ಧಾರವಾಡ ಸಿದ್ದಗಂಗಾ ದೈನಂದಿನ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಯಶವಂತಪುರ –ಹಜರತ್ ನಿಜಾಮುದ್ದೀನ್ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲುಗಳು ಮಾರ್ಗಮಧ್ಯೆ ತಲಾ 30 ನಿಮಿಷ ನಿಲುಗಡೆಗೊಳ್ಳಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-4-39104211

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.