ಬೆಂಗಳೂರು: ಉತ್ತರಹಳ್ಳಿ–ಕೆಂಗೇರಿ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೊದಲ್ಲಿದ್ದ ನಟ ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ತೆರವು ಮಾಡಿದ್ದನ್ನು ವಿರೋಧಿಸಿ, ವಿಷ್ಣುವರ್ಧನ್ ಅಭಿಮಾನಿಗಳು ಸ್ಟುಡಿಯೊ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

ರಾತ್ರೋರಾತ್ರಿ ಸಮಾಧಿಯನ್ನು ತೆರವು ಮಾಡಲಾಗಿದೆ ಎಂದು ಕಣ್ಣೀರು ಹಾಕಿ, ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು ಸ್ಟುಡಿಯೊದ ಒಳಗೆ ನುಗ್ಗಲು ಯತ್ನಿಸಿದರು. ಆಗ ಪೊಲೀಸರು ಹಾಗೂ ಅಭಿಮಾನಿಗಳ ಮಧ್ಯೆ ತಳ್ಳಾಟ ನಡೆಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.

ರಾಜ್ಯ ಸರ್ಕಾರದ ಭರವಸೆಯ ನಡುವೆಯೂ ಅಭಿಮಾನಿ ಸ್ಟುಡಿಯೊದಲ್ಲಿದ್ದ ಸಮಾಧಿಯನ್ನು ಗುರುವಾರ ರಾತ್ರಿ ನೆಲಸಮ ಮಾಡಲಾಗಿದೆ ಎಂದು ವಿಷ್ಣುಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ದೂರಿದ್ದಾರೆ.

‘ವಶಕ್ಕೆ ಪಡೆದ ಪ್ರತಿಭಟನಕಾರರನ್ನು ಬಿಡುಗಡೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ’ ಎಂದು ನೈರುತ್ಯ ವಿಭಾಗದ ಡಿಸಿಪಿ ಅನಿತಾ ಭೀಮಪ್ಪ ಹದ್ದಣ್ಣನವರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.