ಬೆಂಗಳೂರು: ರಾಜ್ಯ ಸರ್ಕಾರ, ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ 4 ರಷ್ಟು ಮೀಸಲಾತಿ ಕಲ್ಪಿಸಿರುವುದನ್ನು ವಿರೋಧಿಸಿ ಏಪ್ರಿಲ್ 8 ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಹೇಳಿದರು.

ಸಂವಿಧಾನದ ಪರಿಚ್ಛೇದ 15ರ ಪ್ರಕಾರ ಧರ್ಮ ಮತ್ತು ಜಾತಿಯ ಆಧಾರದ ಮೇಲೆ ನಾಗರಿಕರ ಮಧ್ಯೆ ತಾರತಮ್ಯ ಮಾಡುವುದನ್ನು ನಿಷೇಧಿಸುತ್ತದೆ. ಸಂವಿಧಾನ ರಚಿಸುವಾಗಲೇ ಅಂಬೇಡ್ಕರ್ ಅವರು ಧರ್ಮಾಧಾರಿತ ಮೀಸಲಾತಿ ವಿರೋಧಿಸಿದ್ದರು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ರಾಜ್ಯ ಸರ್ಕಾರ ಓಲೈಕೆ ರಾಜಕಾರಣ, ಮತ ಬ್ಯಾಂಕ್ ದೃಷ್ಟಿಯಿಂದ ಸಂವಿಧಾನ ಬಾಹಿರವಾಗಿ ಮುಸ್ಲಿಮರಿಗೆ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಅಂಗೀಕರಿಸಿದೆ’ ಎಂದು ದೂರಿದರು.

ಈ ಮೀಸಲಾತಿ ವಿರೋಧಿಸಿ ಈಗಾಗಲೇ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ಅಗತ್ಯ ಬಿದ್ದರೆ ಕಾನೂನು ಹೋರಾಟ ಮಾಡಲಾಗುವುದು. ಈ ಎಲ್ಲ ವಿಷಯಗಳ ಬಗ್ಗೆ ಸಾವರ್ಜನಿಕರಲ್ಲಿ ಜಾಗೃತಿ ಮೂಡಿಸಲು ಏಪ್ರಿಲ್ 8ರಂದು ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ದೀಪಕ್ ರಾಜಗೋಪಾಲ್, ಧರ್ಮ ಪ್ರಚಾರಕ ನಾರಾಯಣನಂದ ಸ್ವಾಮೀಜಿ, ಸಹ ಸಂಯೋಜಕ ಪ್ರಕಾಶ್, ಕಾನೂನು ವಿಭಾಗದ ಮಾರ್ಗದರ್ಶಕ ರಾಮಚಂದ್ರರಾವ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.