ವಿಟ್ಲ: ಗ್ರಾಮ ವಿಕಾಸದ ರಜತ ಮಹೋತ್ಸವಕ್ಕೆ ಮೇ 31ರಂದು ಚಾಲನೆ ಸಿಗಲಿದ್ದು, ಆ.8ರಂದು ಸಮಾರೋಪ ನಡೆಯಲಿದೆ. ಈ ಮಧ್ಯೆ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಸಂಸ್ಥಾನದ ಗುರುದೇವ ಜ್ಞಾನ ಮಂದಿರದಲ್ಲಿ ನಡೆದ ಒಡಿಯೂರು ಗ್ರಾಮ ವಿಕಾಸ ಯೋಜನೆಯ ಬೆಳ್ಳಿ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

ವ್ಯಕ್ತಿ ನಿರ್ಮಾಣದ ಮೂಲಕ ಸಮಾಜ ನಿರ್ಮಾಣ ಸಾಧ್ಯವಾಗಿದ್ದು, ಸೇವೆಯೇ ಸಾಧನೆಯಾಗಬೇಕು. ಇದು ಕೇವಲ ಗ್ರಾಮ ವಿಕಾಸ ಯೋಜನೆಯ ಕಾರ್ಯಕ್ರಮವಲ್ಲ; ಗುರುಬಂಧುಗಳ ಕಾರ್ಯಕ್ರಮವಾಗಿದೆ. ತಾಲ್ಲೂಕುವಾರು ಕಾರ್ಯಕ್ರಮ ನಡೆಸುವುದಾದರೂ ಪ್ರೋತ್ಸಾಹ ನೀಡಲಾಗುವುದು ಎಂದರು. ನಮ್ಮ ಆದರ್ಶವನ್ನು ಉಳಿಸಿ ಬೆಳೆಸಬೇಕು ಎಂದರು.

ಸಾಧ್ವಿ ಮಾತಾನಂದಮಯಿ ಸಾನ್ನಿಧ್ಯ ವಹಿಸಿದ್ದರು.

ಒಡಿಯೂರು ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಎ.ಸುರೇಶ್ ರೈ, ಪತ್ರಕರ್ತ ಮಲಾರ್ ಜಯರಾಮ ರೈ, ಒಡಿಯೂರು ಗ್ರಾಮ ವಿಕಾಸ ಯೋಜನೆಯ ಯೋಜನಾ ನಿರ್ದೇಶಕರ ಕಿರಣ್ ಉರ್ವ, ಒಡಿಯೂರು ಗುರುದೇವ ವಿದ್ಯಾಪೀಠದ ಸಂಚಾಲಕ ಗಣಪತಿ ಭಟ್ ಸೇರಾಜೆ, ಪ್ರಮುಖರಾದ ಯಶವಂತ ವಿಟ್ಲ ಭಾಗವಹಿಸಿದ್ದರು.

ಬಂಟ್ವಾಳ ಸರಪಾಡಿ ವಲಯ ಸಯೋಜಕಿ ಸರೋಜಿನಿ ಪ್ರಾರ್ಥಿಸಿದರು. ಒಡಿಯೂರು ಗ್ರಾಮ ವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಾತೇಶ್ ಭಂಡಾರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಬಂಟ್ವಾಳ ತಾಲ್ಲೂಕು ಸಂಯೋಜಕಿ ಲೀಲಾ ವಂದಿಸಿದರು.

ಗುರುದೇವಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ರಜತ ಸಂಭ್ರಮ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಉದ್ಯಮಿ ಶಶಿಧರ ಶೆಟ್ಟಿ ಬರೋಡಾ, ಕಾರ್ಯಾಧ್ಯಕ್ಷರಾಗಿ ಒಡಿಯೂರು ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಎ.ಸುರೇಶ್ ರೈ ಆಯ್ಕೆಯಾದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-29-275646474

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.