ಮೈಸೂರು: ಇಲ್ಲಿನ ಕುವೆಂಪು ಬೃಂದಾವನ ಪ್ರೌಢಶಾಲೆ ಮೈದಾನದಲ್ಲಿ ಶನಿವಾರ ಮುಕ್ತಾಯಗೊಂಡ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ರಾಜ್ಯಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಮೈಸೂರು ತಂಡದವರು ಚಾಂಪಿಯನ್ ಆಗಿ ಹೊರಹೊಮ್ಮಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಏರ್ಪಡಿಸಿದ್ದ ಕೂಟದಲ್ಲಿ 14 ವರ್ಷದೊಳಗಿನ ಬಾಲಕರು ಹಾಗೂ ಬಾಲಕಿಯರ ವಿಭಾಗದಲ್ಲಿ ತಲಾ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಪ್ರಶಸ್ತಿ ತಮ್ಮದಾಗಿಸಿಕೊಂಡರು.

ಬಾಲಕರ ವಿಭಾಗದಲ್ಲಿ ಎರಡು ಪಂದ್ಯ ಗೆದ್ದ ಬೆಳಗಾವಿ, ಒಂದು ಪಂದ್ಯದಲ್ಲಿ ಜಯ ಸಾಧಿಸಿದ ಕಲಬುರಗಿ ಕ್ರಮವಾಗಿ ಎರಡನೇ ಹಾಗೂ ಮೂರನೇ ಸ್ಥಾನ ಪಡೆದವು. ಬಾಲಕಿಯರ ವಿಭಾಗದಲ್ಲಿ ಕಲಬುರಗಿ ದ್ವಿತೀಯ, ಬೆಳಗಾವಿ ತೃತೀಯ ಸ್ಥಾನ ಪಡೆದವು.

17 ವರ್ಷದೊಳಗಿನ ಬಾಲಕರ ವಿಭಾದಲ್ಲಿ ಬೆಂಗಳೂರು, ಮೈಸೂರು ಹಾಗೂ ಕಲಬುರಗಿ ಮೊದಲ ಮೂರು ಸ್ಥಾನ ಪಡೆದರೆ, ಬಾಲಕಿಯರ ವಿಭಾಗದಲ್ಲಿ ಬೆಳಗಾವಿ, ಬೆಂಗಳೂರು ತಂಡಗಳು ಪ್ರಶಸ್ತಿ ಗೆದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.