ಬೆಂಗಳೂರು: ರಾಜಾಜಿನಗರ ಕ್ಷೇತ್ರದಲ್ಲಿ ‘ಮತ ಕಳ್ಳತನ’ ಆಗಿರುವುದಕ್ಕೆ ರಾಹುಲ್ ಗಾಂಧಿ ಬಳಿ ಯಾವುದೇ ದಾಖಲೆಗಳು ಇದ್ದರೆ ನಾಟಕ ಮಾಡುವುದನ್ನು ಬಿಟ್ಟು ನ್ಯಾಯಾಂಗವನ್ನು ಸಂಪರ್ಕಿಸಲಿ ಎಂದು ರಾಜಾಜಿನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ‘ಮತ ಕಳ್ಳತನ’ ಮಾಡಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸುರೇಶ್ಕುಮಾರ್, ಇವರ ನಾಟಕ ಪ್ರಜ್ಞಾವಂತ ಮತದಾರರಿಗೆ ಮಾಡುತ್ತಿರುವ ಅವಮಾನ ಮತ್ತು ಪ್ರಜಾಪ್ರಭುತ್ವದ ಅಣಕ ಎಂದು ತಿಳಿಸಿದ್ದಾರೆ.

2009 ಮತ್ತು ಆ ಬಳಿಕ ನಡೆದ ಎಲ್ಲ ಲೋಕಸಭಾ ಚುನಾವಣೆಗಳಲ್ಲಿ ರಾಜಾಜಿನಗರ ಕ್ಷೇತ್ರದಲ್ಲಿ ಬಿಜೆಪಿ ಸತತವಾಗಿ ಮುನ್ನಡೆ ಸಾಧಿಸಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 2009ರಲ್ಲಿ 21,304, 2014ರಲ್ಲಿ 48,602, 2019ರಲ್ಲಿ 44,004 ಮತ್ತು 2024ರಲ್ಲಿ 39,529 ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ಅವರು ತಿಳಿಸಿದರು.

'ಲೋಕಸಭೆ ಚುನಾವಣೆಯಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ಮತಗಳ ಸಂಖ್ಯೆಯಲ್ಲೂ ಅಲ್ಪಮಟ್ಟದಲ್ಲಿ ಹೆಚ್ಚಳವಾಗಿದೆ. 2009 ರಲ್ಲಿ ಒಟ್ಟು ಮತಗಳ ಸಂಖ್ಯೆ 1,80,000, 2014ರಲ್ಲಿ 1,94,316, 2019ರಲ್ಲಿ 2,11,000, 2024ರಲ್ಲಿ 2,01,287 ಇತ್ತು. ಕಾಂಗ್ರೆಸ್ ನಾಯಕರು ಆರೋಪಿಸಿರುವಂತೆ ಮತಗಳ ಕಳವು ಮಾಡುವ ಪ್ರಶ್ನೆ ಎಲ್ಲಿಂದ ಉದ್ಭವಿಸುತ್ತದೆ’ ಎಂದು ಅವರು ಪ್ರಶ್ನಿಸಿದ್ದಾರೆ.

‘2024 ರ ಏಪ್ರಿಲ್ನಲ್ಲಿ ಲೋಕಸಭಾ ಚುನಾವಣೆ ನಡೆದು, ಮೇ ತಿಂಗಳಿನಲ್ಲಿ ಫಲಿತಾಂಶ ಬಂದಿತ್ತು. ಈಗ ನಾವು 2025ರ ಆಗಸ್ಟ್ನಲ್ಲಿದ್ದೇವೆ. ಫಲಿತಾಂಶ ಬಂದ 16 ತಿಂಗಳ ಬಳಿಕ ಈ ವಿಷಯವನ್ನು ‘ಸಂಶೋಧಿಸಿ’ ಜನರ ದಾರಿ ತಪ್ಪಿಸುವ ಹತಾಶ ಪ್ರಯತ್ನದಲ್ಲಿದ್ದಾರೆ’ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುದ್ಧಿವಂತ, ಪ್ರಬುದ್ಧ, ಅನುಭವಿ ರಾಜಕೀಯ ನಾಯಕ. ಆದರೆ ಅವರು ರಾಹುಲ್ಗಾಂಧಿಯವರ ಅಸಂಬದ್ಧ ನಿಲುವಿಗೆ ಸಹಮತ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ತಮ್ಮ ಹುದ್ದೆ ಉಳಿಸಿಕೊಳ್ಳುವ ಒತ್ತಡಕ್ಕೆ ಸಿಲುಕಿದ್ದಾರೆ ಎಂದು ಸುರೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.