ಹುಬ್ಬಳ್ಳಿ: ‘ಅರ್ಹ ಮತದಾರರು ಪಟ್ಟಿಯಿಂದ ಬಿಟ್ಟು ಹೋಗಬಾರದು. ಅನರ್ಹರು ಮತದಾರರು ಆಗಬಾರದು ಎಂಬುದೇ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್ಐಆರ್) ಪ್ರಮುಖ ಉದ್ದೇಶ. ಇದೊಂದು ಮತದಾರ ಪಟ್ಟಿ ಶುದ್ಧೀಕರಣ ಕಾರ್ಯ. ಪ್ರತಿಯೊಬ್ಬ ಬೂತ್ಮಟ್ಟದ ಏಜೆಂಟ್ (ಬಿಎಲ್ಎ), ಮತಗಟ್ಟೆ ಅಧ್ಯಕ್ಷರು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಹುಬ್ಬಳ್ಳಿ– ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರ–73ರ ವತಿಯಿಂದ ಹಮ್ಮಿಕೊಂಡಿದ್ದ ‘ಬಿಎಲ್ಎ–2 ಮತಗಟ್ಟೆ ಅಧ್ಯಕ್ಷರು ಹಾಗೂ ಪ್ರಮುಖರ ಕಾರ್ಯಾಗಾರ’ ಉದ್ಘಾಟಿಸಿ ಮಾತನಾಡಿದರು.

‘ಎಸ್ಐಆರ್ ಪ್ರಕ್ರಿಯೆ ಹೊಸದಲ್ಲ. ಈ ಹಿಂದೆ ಹಲವು ಬಾರಿ ನಡೆದಿದೆ. ಚುನಾವಣಾ ಆಯೋಗವು ಎಲ್ಲಾ ಅರ್ಹ ಮತದಾರರನ್ನು ಒಳಗೊಂಡಿರುವ ಕ್ಷೇತ್ರವಾರು ಮತದಾರರ ಪಟ್ಟಿಯನ್ನು ನೀಡಲು ಈ ಪ್ರಕ್ರಿಯೆಯನ್ನು ಆಗಾಗ ನಡೆಸುತ್ತಲೇ ಇದೆ. ಮತ್ತೊಮ್ಮೆ ವ್ಯವಸ್ಥಿತವಾಗಿ ದೇಶದಾದ್ಯಂತ ಈ ಪ್ರಕ್ರಿಯೆ ಆರಂಭಿಸಿದೆ. ಆದರೆ, ಕಾಂಗ್ರೆಸ್ನವರಿಗೆ ಇದು ಹೊಸದಾಗಿ ಕಾಣಿಸುತ್ತದೆ’ ಎಂದು ಹೇಳಿದರು.

‘ಎಸ್ಐಆರ್ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ನವರಿಗೆ ಸರಿಯಾದ ಮಾಹಿತಿ ಇಲ್ಲ. ಇದರ ಇತಿಹಾಸದ ತಿಳಿವಳಿಕೆಯೂ ಇಲ್ಲ. ಮಹಾರಾಷ್ಟ್ರ ಮತ್ತು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿಜೆಪಿ ಮತ ಕಳ್ಳತನ ಮಾಡಿದೆ ಎಂದು ಪದೇ ಪದೇ ಸುಳ್ಳು ಆರೋಪ ಮಾಡುತ್ತಿದ್ದಾರೆ. ಯಾವುದು ಸತ್ಯ ಎಂಬುದು ಜನರಿಗೆ ಗೊತ್ತಿದೆ’ ಎಂದರು.

‘ಮತದಾರರ ಪಟ್ಟಿಯಲ್ಲಿ ಕೆಲ ಮತದಾರರ ಹೆಸರು ಡಿಲಿಟ್ ಆಗುವುದು, ಬಿಟ್ಟು ಹೋಗುವುದು, ಸೇರ್ಪಡೆಯಾಗುವುದು ಸಹಜ. ಆದರೆ, ಈ ಪ್ರಮಾಣ ತುಂಬಾ ಕಡಿಮೆ. ಇದನ್ನೇ ಪ್ರಮುಖವಾಗಿ ಇಟ್ಟುಕೊಂಡು ನಿರಂತರವಾಗಿ ಆರೋಪ ಮಾಡುವುದು ಕಾಂಗ್ರೆಸ್ನವರ ಹವ್ಯಾಸವಾಗಿದೆ’ ಎಂದು ಟೀಕಿಸಿದರು.

‘ಬಿಎಲ್ಎ ಹಾಗೂ ಮತಗಟ್ಟೆ ಅಧ್ಯಕ್ಷರು ನಿಮ್ಮ ವ್ಯಾಪ್ತಿಯಲ್ಲಿ ಪ್ರತಿ ಮನೆಗಳಿಗೆ ಭೇಟಿ ನೀಡಿ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಯಾವುದೇ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ನಿಗಾವಹಿಸಬೇಕು’ ಎಂದು ಸಲಹೆ ನೀಡಿದರು.

‘ಎಸ್ಐಆರ್ ಪ್ರಕ್ರಿಯೆ ಸರ್ಕಾರದ ನಿರ್ಣಯವಲ್ಲ. ಚುನಾವಣಾ ಆಯೋಗ ಕಾರ್ಯ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಈ ಪಟ್ಟಿ ಅನ್ವಯಿಸುತ್ತದೆ. ಸ್ಥಳೀಯ ಸಂಸ್ಥೆಗಳ ಸದಸ್ಯರೂ ಈ ಕಾರ್ಯದಲ್ಲಿ ಭಾಗವಹಿಸಬೇಕು’ ಎಂದರು.

ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ‘ಎಸ್ಐಆರ್ ಸಂಬಂಧಿಸಿದಂತೆ ಈಗಾಗಲೇ ನಮ್ಮ ಕ್ಷೇತ್ರ ವ್ಯಾಪ್ತಿಯ 25 ವಾರ್ಡ್ಗಳಲ್ಲಿ ಪೂರ್ವಭಾವಿ ಸಭೆ ನಡೆಸಿ, ಬಿಎಲ್ಒ–2 ಅವರಿಗೆ ಅಗತ್ಯ ತರಬೇತಿ ನೀಡಲಾಗಿದೆ. ಎಲ್ಲಾ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವ ಹೊಣೆಗಾರಿಕೆ ನಿಮ್ಮ ಮೇಲಿದೆ’ ಎಂದರು.

ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್, ಪಾಲಕೆ ಮೇಯರ್ ಜ್ಯೋತಿ ಪಾಟೀಲ, ಮಂಡಲ ಅಧ್ಯಕ್ಷ ರಾಜು ಕಾಳೆ, ಪ್ರಶಾಂತ ಜಾದವ್, ಜಗದೀಶ ಹಿರೇಮನಿ, ರಾಜಣ್ಣ ಕೊರವಿ, ವೀಣಾ ಭರದ್ವಾಡ, ರಾಮನಗೌಡ ಹಾಗೂ ಬೂತ್ಮಟ್ಟದ ಏಜೆಂಟ್, ಮತಗಟ್ಟೆ ಅಧ್ಯಕ್ಷರು ಹಾಗೂ ಪ್ರಮುಖರು ಇದ್ದರು.

‘50 ಸಾವಿರ ಮನೆಗಳ ಭೇಟಿ ಚಿಂತನೆ’

‘ಮುಂದಿನ ದಿನಗಳಲ್ಲಿ ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿನ 50 ಸಾವಿರ ಮನೆಗಳನ್ನು ಸಂಪರ್ಕಿಸಿ, ಕ್ಷೇತ್ರದಲ್ಲಿ ನಡೆಯುವ ಕಾಮಗಾರಿ, ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರ ಬಳಿ ಚರ್ಚಿಸಿ, ಅವರ ಅಭಿಪ್ರಾಯ ಪಡೆಯಲಾಗುವುದು’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

‘ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಎರಡೂವರೆ ವರ್ಷಗಳಲ್ಲಿ ಅಂದಾಜು ₹40 ಕೋಟಿ ವೆಚ್ಚದಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿಸಲಾಗಿದೆ. ಮುಂದಿನ ದಿನಗಳಲ್ಲಿ 100 ದೇವಾಲಯಗಳ ಅಭಿವೃದ್ಧಿಗೆ ₹1 ಕೋಟಿ ಅನುದಾನ ನೀಡುವ ಚಿಂತನೆಯೂ ಇದೆ’ ಎಂದರು.

ಎಸ್ಐಆರ್ ಪ್ರಕ್ರಿಯೆ ಪ್ರಜಾಪ್ರಭುತ್ವವನ್ನು ಬಲಪಡಿಸುವ ಕೆಲಸ. ಇದರಲ್ಲಿ ಮತಗಟ್ಟೆ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಜವಾಬ್ದಾರಿಯಿಂದ ನಿಭಾಯಿಸಿ
ಪ್ರಲ್ಹಾದ ಜೋಶಿ, ಕೇಂದ್ರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.