ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲ್ಲಾಪುರ ಕ್ಷೇತ್ರದ ರಾಜಕೀಯದಲ್ಲಿ ಬದಲಾವಣೆಯಾಗಲಿದೆ: ವಿ.ಎಸ್.ಪಾಟೀಲ

ಯಡಿಯೂರಪ್ಪ ಭೇಟಿ ಮಾಡಿದ ವಿ.ಎಸ್.ಪಾಟೀಲ
Last Updated 18 ಸೆಪ್ಟೆಂಬರ್ 2018, 7:10 IST
ಅಕ್ಷರ ಗಾತ್ರ

ಮುಂಡಗೋಡ (ಉತ್ತರ ಕನ್ನಡ): ಯಲ್ಲಾಪುರ ಕ್ಷೇತ್ರದ ಮಾಜಿ ಶಾಸಕ ವಿ.ಎಸ್.ಪಾಟೀಲ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಅವರನ್ನು ಮಂಗಳವಾರಬೆಳಿಗ್ಗೆ ಬೆಂಗಳೂರಿನಲ್ಲಿ ಭೇಟಿಯಾಗಿ ಚರ್ಚಿಸಿದ್ದಾರೆ.

ಕ್ಷೇತ್ರದಈಗಿನಶಾಸಕ ಶಿವರಾಮ ಹೆಬ್ಬಾರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂಬುದಕ್ಕೆ ಪೂರಕವಾಗಿ ಈ ಭೇಟಿ ಮಾಡಲಾಗಿದೆಎಂದು ಕ್ಷೇತ್ರದಲ್ಲಿ ವ್ಯಾಖ್ಯಾನಿಸಲಾಗುತ್ತಿದೆ.

ಈ ಬಗ್ಗೆ ‘ಪ್ರಜಾವಾಣಿ’ಗೆ ದೂರವಾಣಿ ಮೂಲಕ ಪ್ರತಿಕ್ರಿಯಿಸಿದ ಪಾಟೀಲ ಅವರು, ‘ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಾಗಿದೆ. ಇನ್ನೆರಡು ದಿನಗಳಲ್ಲಿ ಯಲ್ಲಾಪುರ ಕ್ಷೇತ್ರದ ರಾಜಕೀಯದಲ್ಲಿ ಬದಲಾವಣೆಯಾಗಲಿದೆ. ಬಿಜೆಪಿ ಶಾಸಕರು ಎಲ್ಲರೂ ಒಗ್ಗಟ್ಟಾಗಿದ್ದು, ನಾಳೆ ಒಂದೆಡೆ ಸಭೆ ನಡೆಸಲಿದ್ದಾರೆ’ಎಂದು ಹೇಳಿದರು.

‘ಕಾಂಗ್ರೆಸ್ ಶಾಸಕ ಶಿವರಾಮ ಹೆಬ್ಬಾರ್ ಬಿಜೆಪಿ ಸೇರ್ಪಡೆಯಾದರೆ ಪಕ್ಷದಲ್ಲಿನಿಮಗೆಸಿಗುವ ಸ್ಥಾನಮಾನವೇನು?’ ಎಂದು ಕೇಳಿದಾಗ, ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ನಂತರ ಅದರ ಬಗ್ಗೆ ಚಿಂತಿಸಲಾಗುವುದು’ ಎಂದಷ್ಟೇಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT