ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತೆಲಂಗಾಣದಂತೆ ಇಲ್ಲೂ ರೈತರ ಸಾಲ ಮನ್ನಾ ಮಾಡಿ: ಆರ್‌.ಅಶೋಕ ಒತ್ತಾಯ

Published 21 ಜೂನ್ 2024, 16:14 IST
Last Updated 21 ಜೂನ್ 2024, 16:14 IST
ಅಕ್ಷರ ಗಾತ್ರ

ಬೆಂಗಳೂರು: ‘ನೆರೆಯ ತೆಲಂಗಾಣದಲ್ಲಿ ₹2 ಲಕ್ಷದವರೆಗೆ ರೈತರ ಸಾಲ ಮನ್ನಾ ಮಾಡಲು ಅಲ್ಲಿನ ಸರ್ಕಾರ ನಿರ್ಧಾರ ಮಾಡಿದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರೈತರ ಸಾಲ ಮನ್ನಾ ಮಾಡಿ ರೈತರನ್ನು ಋಣಮುಕ್ತರನ್ನಾಗಿಸಿ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌.ಅಶೋಕ ಒತ್ತಾಯಿಸಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿನ ಪೆಟ್ರೋಲ್, ಡೀಸೆಲ್‌ ದರಕ್ಕೆ ಹೋಲಿಕೆ ಮಾಡಿ ತಮ್ಮ ನಿರ್ಧಾರವನ್ನು ಸಮರ್ಥನೆ ಮಾಡಿಕೊಳ್ಳುವ ಮುಖ್ಯಮಂತ್ರಿಯವರು ತೆಲಂಗಾಣದ ರೈತರ ಸಾಲ ಮನ್ನಾ ಮಾದರಿಯನ್ನು ಅನುಸರಿಸಲಿ ಎಂದು ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.

‘ನೀವೇ ಹೇಳಿಕೊಳ್ಳುವಂತೆ ರಾಜ್ಯದ ಬೊಕ್ಕಸ ಭರ್ತಿಯಾಗಿದ್ದರೆ, ಹಣಕಾಸು ಪರಿಸ್ಥಿತಿ ಚೆನ್ನಾಗಿರುವುದು ನಿಜವೇ ಆಗಿದ್ದರೆ, ನಮ್ಮ ರಾಜ್ಯದ ರೈತರ ಸಾಲ ಮನ್ನಾ ಮಾಡಿ’ ಎಂದು ಅಶೋಕ ‘ಎಕ್ಸ್‌’ ಮೂಲಕ ಸವಾಲು ಹಾಕಿದ್ದರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT