ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ್ಡಿ ಮನ್ನಾ | ಮಾರ್ಚ್‌ 31ರವರೆಗೆ ಅವಧಿ ವಿಸ್ತರಣೆ: ರಾಜ್ಯ ಸರ್ಕಾರ ಆದೇಶ

Published 14 ಮಾರ್ಚ್ 2024, 16:33 IST
Last Updated 14 ಮಾರ್ಚ್ 2024, 16:33 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಸಹಕಾರ ಬ್ಯಾಂಕುಗಳಿಂದ ಸಾಲ ಪಡೆದು 2023ರ ಡಿ. 31ರವರೆಗೆ ಸುಸ್ತಿಯಾಗಿರುವ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಆಧಾರಿತ ಸಾಲಗಳ ಕಂತುಗಳ ಅಸಲು ಪಾವತಿಸಿದರೆ, ಆ ಮೊತ್ತಕ್ಕೆ ಬಾಕಿ ಇರುವ ಬಡ್ಡಿ ಮನ್ನಾ ಮಾಡುವ ಅವಧಿಯನ್ನು ಮಾರ್ಚ್ 31ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸುಸ್ತಿ ಸಾಲವನ್ನು ಫೆ. 29ರ ಒಳಗೆ ಮರುಪಾವತಿಸಿದರೆ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಈ ಹಿಂದೆ ತಿಳಿಸಲಾಗಿತ್ತು.

‌ಪ್ರಾಥಮಿಕ ಪತ್ತಿನ ಕೃಷಿ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು, ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಪಡೆದ ಸಾಲಕ್ಕೆ ಮಾತ್ರ ಈ ಆದೇಶ ಅನ್ವಯ ಆಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT