ಬೆಂಗಳೂರು: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ನಾಲ್ಕೂ ದಿಕ್ಕುಗಳಲ್ಲಿ ಬೃಹತ್ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

‘ಮಹಾನಗರದ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಹಾಗೂ ವಿಲೇವಾರಿ ಅಸಮರ್ಪಕವಾಗಿದೆ’ ಎಂದು ಆಕ್ಷೇಪಿಸಿ ಇಂದಿರಾ ನಗರದ ಕವಿತಾ ಶಂಕರ್ 2012ರಲ್ಲಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ನಗರದಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಬಿಸಾಡಲಾಗಿರುತ್ತದೆ. ಇದರಿಂದ ಪರಿಸರ ಹಾಳು ಮಾಡಲಾಗುತ್ತಿದೆ’ ಎಂದು ಬಲವಾಗಿ ಆಕ್ಷೇಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲರು, ‘ಮಹಾನಗರದ ನಾಲ್ಕೂ ದಿಕ್ಕುಗಳಲ್ಲಿ ಬೃಹತ್ ಪ್ರಮಾಣದ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆ ಮಾಡಲಾಗುವುದು. ಈ ಘಟಕಗಳ ಸ್ಥಾಪನೆಗೆ ನೂರಾರು ಎಕರೆ ಜಮೀನಿನ ಅವಶ್ಯವಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಕಾಲಾವಕಾಶ ನೀಡಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂನ್ ಮೊದಲ ವಾರಕ್ಕೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.