ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Express | ಬಿಜೆಪಿಯನ್ನು ಕಾಪಾಡಲು ಶಿವಮೊಗ್ಗದಲ್ಲಿ ಸ್ಪರ್ಧೆ: ಈಶ್ವರಪ್ಪ

Published 17 ಮಾರ್ಚ್ 2024, 14:01 IST
Last Updated 17 ಮಾರ್ಚ್ 2024, 14:01 IST
ಅಕ್ಷರ ಗಾತ್ರ

ಪ್ರಧಾನಿ ನರೇಂದ್ರ ಮೋದಿ ಮಾ.18ಕ್ಕೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಆದರೆ, ಕಾರ್ಯಕ್ರಮದ ವೇದಿಕೆ ಹಂಚಿಕೊಳ್ಳಲು ಸಾಧ್ಯವಿಲ್ಲ' ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿ ಭಾನುವಾರ ಹೇಳಿದರು. 'ಪ್ರಧಾನಿ ಮೋದಿ ನನ್ನ ದೇವರು. ಪ್ರಾಣ ಹೋದರೂ ಅವರ ಹೆಸರು ಹೇಳುವುದನ್ನು ಬಿಡುವುದಿಲ್ಲ’ ಎಂದರು. ಯಡಿಯೂರಪ್ಪ ಅವರು ಸಂಧಾನಕ್ಕಾಗಿ ಶಾಸಕ ಆರಗ ಜ್ಞಾನೇಂದ್ರ ಅವರನ್ನು ನನ್ನ ಮನೆಗೆ ಕಳುಹಿಸಿದ್ದರು. ನಾನು ಅವರ ಸಂಧಾನಕ್ಕೆ ಒಪ್ಪಿಲ್ಲ. ನನ್ನ ಪುತ್ರನಿಗೆ ಟಿಕೆಟ್ ತಪ್ಪಿಸಿದ್ದು ಮಾತ್ರವಲ್ಲ, ನನಗೆ ಯಡಿಯೂರಪ್ಪ ಕುಟುಂಬದವರು ಮೋಸ ಮಾಡಿದ್ದಾರೆ. ಯಡಿಯೂರಪ್ಪ ಮತ್ತು ಅವರ ಮಗನಿಂದ ಬಿಜೆಪಿಯನ್ನು ಮುಕ್ತಗೊಳಿಸುವುದಕ್ಕಾಗಿ ಬಂಡಾಯವಾಗಿ ಸ್ಪರ್ಧಿಸುತ್ತಿದ್ದೇನೆ’ ಎಂದು ಅವರು ಪುನರುಚ್ಚರಿಸಿದರು. ಇದರೊಂದಿಗೆ ದಿನದ ಪ್ರಮುಖ ವಿದ್ಯಮಾನಗಳು ಈ ವಿಡಿಯೊದಲ್ಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT