ದೂಧಗಂಗಾ ಮತ್ತು ವೇದಗಂಗಾ ನದಿಗಳ ಒಳಹರಿವು ಇಳಿಮುಖವಾಗಿದ್ದು, ಜತ್ರಾಟ-ಭೀವಶಿ ಗ್ರಾಮಗಳ ಮಧ್ಯೆ ಇರುವ ಸೇತುವೆ ಮೇಲೆ ಕೇವಲ ಅರ್ಧ ಅಡಿಯಷ್ಟು ಮಾತ್ರ ನೀರು ಹರಿದು ಬರುತ್ತಿದೆ. ಕೃಷ್ಣಾ ನದಿ ನೀರಿನ ಒಳ ಹರಿವು ಯಥಾಸ್ಥಿತಿಯಲ್ಲಿ ಇದೆ.
ಹಿಪ್ಪರಗಿ ಜಲಾಶಯಕ್ಕೆ 2.05 ಲಕ್ಷ ಕ್ಯುಸೆಕ್ ಒಳಹರಿವು ಇದ್ದು, 2.05 ಲಕ್ಷ ಕ್ಯುಸೆಕ್ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ ಗೀತಾ ಕೌಲಗಿ ತಿಳಿಸಿದ್ದಾರೆ.