ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಜಲಕ್ಷಾಮ | ಕಾಂಗ್ರೆಸ್‌ಗೆ ಗ್ಯಾರಂಟಿ ಉತ್ಸವ: ಆರ್‌. ಅಶೋಕ ತರಾಟೆ

Published 11 ಮಾರ್ಚ್ 2024, 15:32 IST
Last Updated 11 ಮಾರ್ಚ್ 2024, 15:32 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಜನರು ಜಲಕ್ಷಾಮದಿಂದ ಹನಿ ಹನಿ ನೀರಿಗೂ ತತ್ತರಿಸುತ್ತಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಸಮಾವೇಶದ ಹೆಸರಿನಲ್ಲಿ ಜನರ ತೆರಿಗೆ ಹಣದಿಂದ ಜಾತ್ರೆ ಮಾಡುತ್ತಿದ್ದಾರೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌.ಅಶೋಕ ಹೇಳಿದ್ದಾರೆ.

‘ರಾಜ್ಯದಲ್ಲಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಕ್ಷಾಂತರ ಕೃಷಿ ಕಾರ್ಮಿಕರು ಹೊಟ್ಟೆಪಾಡಿಗಾಗಿ ಊರು ಬಿಟ್ಟು ಗುಳೆ ಹೋಗಿದ್ದಾರೆ. 40 ಕ್ಕೂ ಹೆಚ್ಚು ನೇಕಾರರು ದಿಕ್ಕು ಕಾಣದೇ ಜೀವ ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಜನ ತೊಟ್ಟು ನೀರಿಗೂ ಪರದಾಡುತ್ತಿದ್ದಾರೆ’ ಎಂದು ಅವರು ‘ಎಕ್ಸ್‌’ನಲ್ಲಿ ತಿಳಿಸಿದ್ದಾರೆ.

‘ರಾಜ್ಯದಲ್ಲಿ ಇಂತಹ ಸೂತಕದ ವಾತಾವರಣ ಇರುವಾಗ ಗ್ಯಾರಂಟಿ ಸಮಾವೇಶದ ಹೆಸರಿನಲ್ಲಿ ಪ್ರತಿ ತಾಲ್ಲೂಕಿಗೆ ₹50 ಲಕ್ಷ, ಪ್ರತಿ ಜಿಲ್ಲೆಗೆ ₹1 ಕೋಟಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಭಾಗವಹಿಸುವ ಕಾರ್ಯಕ್ರಮಗಳಿಗೆ ₹2 ಕೋಟಿಯಂತೆ ಖರ್ಚು ಮಾಡಿ ಉತ್ಸವ ಮಾಡುತ್ತಿರುವ ಇವರಿಗೆ ಕಿಂಚಿತ್ತಾದರೂ ಮಾನವೀಯತೆ, ಕರ್ತವ್ಯ ಪ್ರಜ್ಞೆ ಇದೆಯೇ’ ಎಂದು ಪ್ರಶ್ನಿಸಿದ್ದಾರೆ.

‘ಗ್ಯಾರಂಟಿ ಸಮಾವೇಶಕ್ಕಾಗಿ ನೂರಾರು ಕೋಟಿ ಪೋಲು ಮಾಡುವ ಬದಲು ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬಹುದಿತ್ತು’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT