ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯಲಹಂಕ: ನೀರಿಗಾಗಿ ಸಿಪಾಯಿಗಳ ಕುಟುಂಬದವರ ಪ್ರತಿಭಟನೆ

Published 15 ಆಗಸ್ಟ್ 2024, 23:50 IST
Last Updated 15 ಆಗಸ್ಟ್ 2024, 23:50 IST
ಅಕ್ಷರ ಗಾತ್ರ

ಯಲಹಂಕ: ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿ.ಆರ್‌.ಪಿ.ಎಫ್‌) ಸಿಬ್ಬಂದಿ ಕ್ವಾರ್ಟಸ್‌ಗಳಿಗೆ ಬೆಂಗಳೂರು ಜಲಮಂಡಳಿಯಿಂದ ನೀರು ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ, ಸಿಪಾಯಿಗಳ ಕುಟುಂಬ ಸದಸ್ಯರು ಪ್ರತಿಭಟನೆ ನಡೆಸಿದರು.

ಶುಕ್ರವಾರ ವರಮಹಾಲಕ್ಷ್ಮಿ ಹಬ್ಬವಿದ್ದು, ನೀರಿನ ಕೊರತೆ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ನೂರಾರು ಮಹಿಳೆಯರು, ಯಲಹಂಕ-ದೊಡ್ಡಬಳ್ಳಾಪುರ ಮುಖ್ಯರಸ್ತೆಯ ಸಿ.ಆರ್.ಪಿ.ಎಫ್‌ ಕೇಂದ್ರದ ಗೇಟ್‌ನ ಮುಂಭಾಗದಲ್ಲಿ ಗುರುವಾರ ಸಂಜೆ ರಸ್ತೆತಡೆ ನಡೆಸಿ ಪ್ರತಿಭಟಿಸಿದರು.

ಮುಖ್ಯರಸ್ತೆ ಪಕ್ಕದಲ್ಲಿ ಎರಡು ಗಂಟೆ ಪ್ರತಿಭಟಿಸಿದ್ದು, ವಾಹನಸಂಚಾರ ವ್ಯತ್ಯಯವಾಗಿತ್ತು. ಪೊಲೀಸರು ಪ್ರತಿಭಟನಕಾರರ ಮನವೊಲಿಸಿ, ಸಂಚಾರಕ್ಕೆ ಅನುವುಮಾಡಿಕೊಟ್ಟರು.

'ಕ್ವಾರ್ಟಸ್‌ನಲ್ಲಿ ಎರಡು ಸಾವಿರಕ್ಕೂ ಹೆಚ್ಚು ಮನೆಗಳಿವೆ. 20 ದಿನಗಳಿಂದ ಸರಿಯಾಗಿ ನೀರು ಪೂರೈಕೆ ಆಗಿಲ್ಗ. ಅಧಿಕಾರಿಗಳ ಮನೆಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿದೆ. ಟ್ಯಾಂಕರ್‌ ಮೂಲಕ ಕೆಲವೊಮ್ಮೆ ನೀರು ಸರಬರಾಜು ಮಾಡುತ್ತಿದ್ದು, ಬಿಂದಿಗೆಗಳಲ್ಲಿ ಒಯ್ಯುವಸ್ಥಿತಿ ನಿರ್ಮಾಣವಾಗಿದೆ' ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ಜಲಮಂಡಳಿ ಅಧಿಕಾರಿಗಳು ಹಾಗೂ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಗುರುವಾರ ರಾತ್ರಿಯಿಂದಲೇ ನೀರು ಪೂರೈಸುವ ಭರವಸೆ ನೀಡಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT