ಶಿವಮೊಗ್ಗ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ನಡೆಸಲು ಹೈಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಡುತ್ತಾರೆ ಎಂದು ವೈಯಕ್ತಿಕವಾಗಿ ನನಗೆ ವಿಶ್ವಾಸವಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಕಾನೂನಿಗಿಂತಲೂ ಯಾರು ದೊಡ್ಡವರಲ್ಲ. ಸಿದ್ದರಾಮಯ್ಯ ಜೊತೆಗೆ ಈ ಹಿಂದೆ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಅವರೊಬ್ಬ ಸೂಕ್ಷ್ಮ ಮನಸ್ಸಿನ ರಾಜಕಾರಣಿ. ಇದೀಗ ಅವರ ಮೇಲೆ ತನಿಖೆಗೆ ಆದೇಶಿಸಲಾಗಿದೆ. ಸಿಎಂ ಇದನ್ನು ಅರಿತುಕೊಳ್ಳುವ ಅಗತ್ಯವಿದೆ ಎಂದು ಗುರುವಾರ ಇಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
'ಕಾನೂನು ತನ್ನ ಪಾಡಿಗೆ ತಾನು ಕೆಲಸ ಮಾಡುತ್ತದೆ. ಹೀಗಾಗಿಯೇ ಆ ವಿಷಯದಲ್ಲಿ ನಾನು ಹೆಚ್ಚು ಮಾತನಾಡುವುದಿಲ್ಲ' ಎಂದು ಹೇಳಿದರು.