ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಸು ಹಾದಿಯಲ್ಲೇ ಸರ್ಕಾರದ ಹೆಜ್ಜೆ: ಸಿದ್ದರಾಮಯ್ಯ

Published 6 ಜೂನ್ 2023, 20:15 IST
Last Updated 6 ಜೂನ್ 2023, 20:15 IST
ಅಕ್ಷರ ಗಾತ್ರ

ಬೆಂಗಳೂರು: ದೇವರಾಜ ಅರಸು ಅವರು ಮುತ್ಸದ್ಧಿ ರಾಜಕಾರಣಿ. ಮುಖ್ಯಮಂತ್ರಿಯಾಗಿ ಅವರು ಮಾಡಿದ ಕೆಲಸ ಎಲ್ಲ ರಾಜಕಾರಣಿಗಳಿಗೂ ಸ್ಫೂರ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಮಂಗಳವಾರ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಅವರು ಮಾತನಾಡಿದರು.

ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಅರಸು ಹಲವು ಸಾಮಾಜಿಕ, ಕ್ರಾಂತಿಕಾರಿ ತೀರ್ಮಾನಗಳನ್ನು ಕೈಗೊಂಡಿದ್ದರು. ಭೂ ಸುಧಾರಣಾ ಕಾಯ್ದೆ, ಜೀತಪದ್ಧತಿ ಮುಕ್ತಿ, ಮಲಹೊರುವ ಪದ್ಧತಿ ನಿಷೇಧಕ್ಕೆ ಶ್ರಮಿಸಿದ್ದರು. ರೈತರ ಸಾಲ ವಿಮೋಚನಾ ಕಾಯ್ದೆ ಜಾರಿಗೆ ತಂದಿದ್ದರು. ‘ಹಾವನೂರು ಆಯೋಗ‘ ರಚಿಸಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ್ದರು. ಧ್ವನಿಯಿಲ್ಲದ ಜನರ ದನಿಯಾಗಿದ್ದರು. ರಾಜಕೀಯ ವ್ಯವಸ್ಥೆಯಲ್ಲಿಯೂ ಸಾಮಾಜಿಕ ನ್ಯಾಯ ತರಲು ಶ್ರಮಿಸಿದ್ದರು ಎಂದರು.

ಉಳುವವನೆ ಭೂ ಒಡೆಯ ಎಂಬ ಕ್ರಾಂತಿಕಾರಿ ತೀರ್ಮಾನಗಳನ್ನು ಮಾಡಿದ್ದರು. ಅವರ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT