ಮೈಸೂರು: ಸಂವೇದನಾಶೀಲ ಮುಖ್ಯಮಂತ್ರಿ ಎನಿಸಿಕೊಂಡಿದ್ದ ಬಸವರಾಜ ಬೊಮ್ಮಾಯಿ ಅವರಿಂದ ನವದೆಹಲಿಯ ರೈತರ ಪ್ರತಿಭಟನೆ ಕಾಂಗ್ರೆಸ್ ಪ್ರಾಯೋಜಿತ ಎಂಬ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಸಹ ಅಧ್ಯಕ್ಷ ವಿ.ಆರ್.ಸುದರ್ಶನ್ ತಿಳಿಸಿದರು.

ರೈತರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಹಾಗಿದ್ದರೆ ಇವರು ರೈತರ ಪರವಾಗಿ ಹೋರಾಟ ಮಾಡೇ ಇಲ್ಲವೇ ಎಂದು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ಬಿ.ಎಸ್.ಯಡಿಯೂರಪ್ಪ ಅವರು ರೈತರ ಪರ ಹೋರಾಡಿದವರು ಎನಿಸಿಕೊಂಡಿದ್ದಾರೆ. ಇವರ ಆಶೀರ್ವಾದ ಪಡೆದು ಮುಖ್ಯಮಂತ್ರಿ ಆದ ಬಸವರಾಜ ಬೊಮ್ಮಾಯಿ ರೈತರ ಹೋರಾಟ ಕುರಿತು ನೀಡಿದ ಹೇಳಿಕೆ ಗೌರವ ತರುವಂತದ್ದಲ್ಲ ಎಂದರು.
ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ಅವಧಿಪೂರ್ವ ಚುನಾವಣೆ ಬರುವ ಸಾಧ್ಯತೆ ಇದೆ. ಅದಕ್ಕಾಗಿ ಕಾಂಗ್ರೆಸ್ ತಕ್ಕ ಸಿದ್ದತೆ ನಡೆಸಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.