ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮ, ಭಕ್ತಿ ಬಗ್ಗೆ ಬೇರೆಯವರಿಂದ ಕಲಿಯುವ ಅಗತ್ಯ ನಮಗಿಲ್ಲ– ಡಿ.ಕೆ. ಶಿವಕುಮಾರ್

Published 21 ಜನವರಿ 2024, 7:43 IST
Last Updated 21 ಜನವರಿ 2024, 7:43 IST
ಅಕ್ಷರ ಗಾತ್ರ

ಬೆಂಗಳೂರು: ‘ನಾವು ಪೂಜೆ, ಪುನಸ್ಕಾರ ಮಾಡಿಕೊಂಡು ನಮ್ಮ ಸಂಸ್ಕೃತಿ ಪಾಲಿಸಿಕೊಂಡು ಬಂದಿದ್ದೇವೆ. ಧರ್ಮ, ಭಕ್ತಿ ಬಗ್ಗೆ ಬೇರೆಯವರಿಂದ ಕಲಿಯುವ ಅಗತ್ಯ ನಮಗಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸೋಮವಾರ (ಜ 22) ಸರ್ಕಾರಿ ರಜೆ ಘೋಷಣೆ ಮಾಡಬೇಕು ಎಂಬ ಬಿಜೆಪಿ ನಾಯಕರ ಒತ್ತಾಯದ ಬಗ್ಗೆ ಸುದ್ದಿಗಾರರು ಕೇಳಿದಾಗ ಪ್ರತಿಕ್ರಿಯಿಸಿದ ಅವರು, ‘ಭಕ್ತಿ, ಧರ್ಮ, ಗೌರವವನ್ನು ನಾವು ಪ್ರಚಾರಕ್ಕೆ ಬಳಸುವುದಿಲ್ಲ. ಪ್ರಾರ್ಥನೆಗಳಿಂದ ಫಲ ಸಿಗುತ್ತದೆ ಎಂಬುದು ನಮ್ಮ ನಂಬಿಕೆ. ಹೀಗಾಗಿ ಪ್ರಾರ್ಥನೆ ಮಾಡಿಕೊಳ್ಳಲು ಹೇಳಿದ್ದೇವೆ. ಬೇರೆಯವರು ಹೇಳುವ ಮುನ್ನವೇ ನಮ್ಮ ಸರ್ಕಾರ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಸೂಚನೆ ನೀಡಿದೆ. ದೇವಾಲಯಗಳಲ್ಲಿ ಯಾವ ಪೂಜೆ, ಪುನಸ್ಕಾರ ಮಾಡಬೇಕೋ ಅದನ್ನು ಮಾಡಲಾಗುವುದು. ಬೇರೆಯವರಿಂದ ನಾವು ಹೇಳಿಸಿಕೊಳ್ಳುವ ಪ್ರಮೇಯವೇ ಇಲ್ಲ’ ಎಂದರು.

‘ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ ಇದ್ದಾನೆ. ನನ್ನ ಹೆಸರಿನಲ್ಲಿ ಶಿವ ಇದ್ದಾನೆ. ಧರ್ಮ, ಸಂಸ್ಕೃತಿ ಪಾಲನೆ ವಿಚಾರವಾಗಿ ನಮಗೆ ಯಾರೂ ಹೇಳಿಕೊಡುವುದೂ ಬೇಡ, ಒತ್ತಡ ಹಾಕುವುದೂ ಬೇಡ. ನಮ್ಮ ಕರ್ತವ್ಯ ನಾವು ಮಾಡುತ್ತೇವೆ. ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಮಾಡಬಾರದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT