ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭರವಸೆ ಈಡೇರಿಸಲು ಬದ್ಧ ಎಂದ ಸಿಎಂ: ಕಾಂಗ್ರೆಸ್ ‘ಪಂಚ’ ಗ್ಯಾರಂಟಿಗಳ ವಿವರ ಇಲ್ಲಿದೆ

Published 20 ಮೇ 2023, 11:27 IST
Last Updated 20 ಮೇ 2023, 11:27 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಜನರಿಗೆ ನೀಡಿರುವ 5 ಗ್ಯಾರಂಟಿಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗದಂತೆ ಭರವಸೆಗಳನ್ನು ಜಾರಿ ಮಾಡುತ್ತೇವೆ ಎಂದರು.

ಸದ್ಯ ಎಲ್ಲ ಗ್ಯಾರಂಟಿಗಳಿಗೆ ಸಚಿವ ಸಂಪುಟ ತಾತ್ವಿಕವಾಗಿ ಮಾತ್ರ ಒಪ್ಪಿಗೆ ನೀಡಿದೆ. ಮುಂದಿನ ಸಚಿವ ಸಂಪುಟ ಸಭೆ ಬಳಿಕ ಅಧಿಕೃತವಾಗಿ ಜಾರಿ ಮಾಡುತ್ತೇವೆ ಎಂದರು.

ಕಾಂಗ್ರೆಸ್ ‘ಪಂಚ’ ಗ್ಯಾರಂಟಿಗಳ ವಿವರ ಇಲ್ಲಿದೆ...

* ಗೃಹ ಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯುನಿಟ್‌ವರೆಗೆ ವಿದ್ಯುತ್ ಉಚಿತ

* ಗೃಹ ಲಕ್ಷ್ಮೀ ಯೋಜನೆಯಡಿ ಮನೆಯೊಡತಿಗೆ ತಿಂಗಳಿಗೆ ₹2000

* ಅನ್ನಭಾಗ್ಯ – ಬಿಪಿಎಲ್‌ ಕಾರ್ಡ್‌ದಾರರಿಗೆ ಪ್ರತಿ ತಿಂಗಳು10 ಕೆ.ಜಿ. ಅಕ್ಕಿ ಉಚಿತ

* ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಎರಡು ವರ್ಷಗಳವರೆಗೆ ತಿಂಗಳಿಗೆ ₹3,000 ಮತ್ತು ಡಿಪ್ಲೊಮಾ ಪದವೀಧರರಿಗೆ ತಿಂಗಳಿಗೆ ₹1,500 ಭತ್ಯೆ ನೀಡಲಾಗುವುದು. ಇದು ಪ್ರಸಕ್ತ ವರ್ಷ ಉತ್ತೀರ್ಣರಾದವರಿಗೆ ಮಾತ್ರ ಅನ್ವಯ.

* ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪಾಸ್ (ಕರ್ನಾಟಕದ ಮಹಿಳೆಯರಿಗೆ ಮಾತ್ರ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT