ಬೆಂಗಳೂರು: ‘ಮೆಟ್ರೊ ಪ್ರಯಾಣ ದರ ಇಳಿಸಬೇಕು ಎಂದು ನಮ್ಮ ಸರ್ಕಾರದ ಅಭಿಪ್ರಾಯವನ್ನು ಬಿಎಂಆರ್ಸಿಎಲ್ಗೆ ತಿಳಿಸಿದ್ದು, ಅಂತಿಮ ತೀರ್ಮಾನ ಕೇಂದ್ರ ಸಮಿತಿ ಕೈಗೊಳ್ಳಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

‘ಪ್ರಯಾಣ ದರ ಏರಿಕೆಗೂ ನಮಗೂ ಸಂಬಂಧವಿಲ್ಲ. ಈ ವಿಚಾರ ರಾಜ್ಯ ಸರ್ಕಾರದ ಸುಪರ್ದಿಗೆ ಬರುವುದಿಲ್ಲ. ಇದಕ್ಕಾಗಿಯೇ ಕೇಂದ್ರ ಸಮಿತಿ ರಚಿಸಲಾಗಿದೆ’ ಎಂದು ಅವರು ಸುದ್ದಿಗಾರರಿಗೆ ಗುರುವಾರ ತಿಳಿಸಿದರು.

‘ಜನರ ಮನವಿ ಆಲಿಸಿ ಮುಖ್ಯಮಂತ್ರಿಯವರು ಮೆಟ್ರೊ ದರ ಇಳಿಸುವ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ. ಜನಸಾಮಾನ್ಯರು ಹಾಗೂ ಮೆಟ್ರೊ ಹಿತಾಸಕ್ತಿ ಕಾಯಲು ಯಾವ ನಿರ್ಧಾರ ಮಾಡುತ್ತಾರೋ ಮಾಡಲಿ. ಈ ದರ ನಿಗದಿಗೆ ನ್ಯಾಯಾಧೀಶರ ನೇತೃತ್ವದ ಪ್ರತ್ಯೇಕ ಕೇಂದ್ರ ಸಮಿತಿ ಮಾಡಲಾಗಿದೆ. ಆ ಸಮಿತಿಗೆ ನಾವು ನಮ್ಮ ಅಭಿಪ್ರಾಯ ತಿಳಿಸುತ್ತೇವೆ. ಅಂತಿಮ ನಿರ್ಧಾರ ಅವರದು’ ಎಂದರು.

‘ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ಅಧಿಕಾರಿಗಳ ಜತೆ ಬೆಳಿಗ್ಗೆ ಚರ್ಚೆ ಮಾಡಿದ್ದೇನೆ. ದರ ಏರಿಕೆ ನಿರ್ಧಾರದ ಬಗ್ಗೆ ಮರುಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದ್ದೇನೆ. ಆದರೆ, ಮೆಟ್ರೊ ದರ ಪರಿಷ್ಕರಣೆ ನಮ್ಮ ಕೈಯಲ್ಲಿ ಇಲ್ಲ. ಕೇಂದ್ರ ಸರ್ಕಾರದ ಕಾರ್ಯದರ್ಶಿಗಳೇ ಮಟ್ರೊ ಮುಖ್ಯಸ್ಥರಾಗಿದ್ದಾರೆ. ಮೆಟ್ರೊ ದರ ನಿಗದಿಗೆ ರಚಿಸಲಾಗಿರುವ ಸಮಿತಿ ಸಾಧಕ–ಬಾಧಕಗಳನ್ನು ನೋಡಿ ತೀರ್ಮಾನ ಮಾಡುತ್ತದೆ. ದರ ಏರಿಕೆ ಮಾನದಂಡಗಳನ್ನು ಪರಿಶೀಲಿಸಿ, ಮತ್ತೆ ಲೆಕ್ಕಾಚಾರ ಮಾಡಿ ದರ ಕಡಿಮೆ ಮಾಡಲು ಸಮಿತಿ ಮುಂದೆ ಪ್ರಸ್ತಾಪ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.