ಬೆಂಗಳೂರು: ‘ಹೆಣದ ಮೇಲೆ ರಾಜಕೀಯ ಮಾಡುವುದು ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರ ಕೆಲಸ. ನಾವು (ಕಾಂಗ್ರೆಸ್) ಆ ರೀತಿ ನೀಚ ರಾಜಕೀಯ ಮಾಡುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ದುರಂತದ ವಿಷಯದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಅದೇನಿದ್ದರೂ ಬಿಜೆಪಿ ಮತ್ತು ಜೆಡಿಎಸ್ ಕೆಲಸ’ ಎಂದರು.

‘ಅಹಮದಾಬಾದ್ ವಿಮಾನ ದುರಂತ ನಡೆದ ಸ್ಥಳ ನೋಡಿದರೆ ಆಘಾತವಾಗುತ್ತದೆ. ಅಕಸ್ಮಾತ್ 500 ಮೀಟರ್ ಮುಂದಕ್ಕೆ ಹೋಗಿ ವಿಮಾನ ಅಪ್ಪಳಿಸಿದ್ದರೂ ಸಾವಿರಾರು ಜನರ ಜೀವಕ್ಕೆ ಹಾನಿಯಾಗುತ್ತಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಾವು ಕೆಲವರನ್ನು ಭೇಟಿ ಮಾಡಿದ್ದೇವೆ’ ಎಂದರು.

‘ಈ ಘಟನೆಯ ಬಳಿಕ ವಿಮಾನ ಯಾನ ಸಚಿವರ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮೂಡುತ್ತಿದೆ’ ಎಂದಾಗ ಪ್ರತಿಕ್ರಿಯಿಸಿದ ಶಿವಕುಮಾರ್, ‘ಈ ಹಿಂದೆ ಸಂಭವಿಸಿದ ವಿಮಾನ ದುರಂತ ಘಟನೆಗಳು ಮತ್ತು ಈ ಘಟನೆಯನ್ನು ಮುಂದಿಟ್ಟುಕೊಂಡು ಟೀಕೆ ಮಾಡಬಹುದು. ಆದರೆ, ಈ ವಿಚಾರವನ್ನು ರಾಜಕೀಯಗೊಳಿಸುವ ವ್ಯಕ್ತಿ ನಾನಲ್ಲ. ಈ ಸಮಯದಲ್ಲಿ ಕೇಂದ್ರ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.