ಬೆಂಗಳೂರು: ರಾಜ್ಯದ ಕೆಲವೆಡೆ ಬುಧವಾರದಿಂದ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬುಧವಾರ 20 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಯ ಒಂದು ಅಥವಾ ಎರಡು ಸ್ಥಳದಲ್ಲಿ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವೆಡೆ ಗುರುವಾರ ಮತ್ತು ಶುಕ್ರವಾರ ಬಿರುಗಾಳಿ ಸಹಿತ ಮಳೆ ಸುರಿಯುವ ಸಂಭವವಿದೆ. ಒಂದು ಅಥವಾ ಎರಡು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುರುವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಬಗ್ಗೆ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಐದು ದಿನಗಳ ಅವಧಿಯಲ್ಲಿ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ದೊಡ್ಡ ಬದಲಾವಣೆಯಿಲ್ಲ ಎಂದು ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.