ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾಳೆ ರಾಜ್ಯದ ಕೆಲವೆಡೆ ಭಾರಿ ಮಳೆ ಸಾಧ್ಯತೆ

Published 2 ಜೂನ್ 2024, 15:20 IST
Last Updated 2 ಜೂನ್ 2024, 15:20 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕೆಲವೆಡೆ ಸೋಮವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಹವಾಮಾನ ಇಲಾಖೆಯು ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಈ ಜಿಲ್ಲೆಗಳ ಜತೆಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಯ ಒಂದೆರಡು ಕಡೆ ಗಾಳಿ ಸಹಿತ ಭಾರಿ ಮಳೆ ಸಾಧ್ಯತೆಯಿದೆ. 

ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಭಾರಿ ಮಳೆ ಆಗಬಹುದು. ಕೆಲವೆಡೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. 

ಮುಂದಿನ ಎರಡು ದಿನ ರಾಜ್ಯದಾದ್ಯಂತ ಗರಿಷ್ಠ ಹಾಗೂ ಕನಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT