ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದಲ್ಲಿ ನಾಳೆ ಗುಡುಗು ಸಹಿತ ಭಾರಿ ಮಳೆ: 20 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’

Published 1 ಜೂನ್ 2024, 15:42 IST
Last Updated 1 ಜೂನ್ 2024, 15:42 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 20 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ರಾಯಚೂರು, ಕೊಪ್ಪಳ, ಗದಗ, ಹಾವೇರಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ನಗರಕ್ಕೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಹಾಗೂ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ಮುಂದಿನ ಎರಡು ದಿನ ರಾಜ್ಯದಾದ್ಯಂತ ಗರಿಷ್ಠ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಸಾಧಾರಣ ಮಳೆ ಸುರಿಯುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. 

ಕೇರಳ ಪ್ರವೇಶಿಸಿರುವ ನೈರುತ್ಯ ಮುಂಗಾರು, ಮುಂದಿನ ಎರಡರಿಂದ ಮೂರು ದಿನಗಳಲ್ಲಿ ಕರ್ನಾಟಕಕ್ಕೆ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT