ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಪೊರ್‌ಜಾಯ್ ಚಂಡಮಾರುತ: ಐದು ದಿನ ಭಾರಿ ಮಳೆ

Published 9 ಜೂನ್ 2023, 4:16 IST
Last Updated 9 ಜೂನ್ 2023, 4:16 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಪೊರ್‌ಜಾಯ್’ ಚಂಡಮಾರುತದ ಪರಿಣಾಮ ಮುಂದಿನ ಐದು ದಿನಗಳು ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40–45 ಕಿ.ಮೀ. ಇಂದ, 55 ಕಿ.ಮೀ. ವೇಗದಲ್ಲಿ ಶುಕ್ರವಾರ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಮುನ್ನೆಚ್ಚರಿಕೆ ನೀಡಿದೆ. 

ಕರಾವಳಿಯ ಹಲವೆಡೆ ಹಾಗೂ ಒಳನಾಡಿನ ಕೆಲವೆಡೆ ಶುಕ್ರವಾರ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ತೀವ್ರತೆ ಹೆಚ್ಚಲಿದೆ. ಕೆಲವೆಡೆ ಬಿರುಗಾಳಿ ಸಹಿತ ಮಳೆ ಸುರಿಯಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ. 

ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಹಾಗೂ ತುಮಕೂರು ಜಿಲ್ಲೆಗೆ ಇದೇ ಶನಿವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. 12ರವರೆಗೂ ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಮುಂದುವರಿಯಲಿದೆ. 

ಗುರುವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಮಳೆಯಾಗಿದೆ. ಯಾದಗಿರಿಯ ಕವಾಡಿಮಟ್ಟಿಯಲ್ಲಿ ಗರಿಷ್ಠ (6 ಸೆಂ.ಮೀ.) ಮಳೆಯಾಗಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (41.5 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ ಎಂದು ಇಲಾಖೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT