ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಪ್ರಿಲ್ 6ರಿಂದ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ!

Published 3 ಏಪ್ರಿಲ್ 2024, 15:50 IST
Last Updated 3 ಏಪ್ರಿಲ್ 2024, 15:50 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧೆಡೆ ಇದೇ 6 ರಿಂದ ನಾಲ್ಕು ದಿನಗಳು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಗುರುವಾರ ಹಾಗೂ ಶುಕ್ರವಾರವೂ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಕಲಬುರಗಿ, ವಿಜಯಪುರ, ಕೊಪ್ಪಳ ಮತ್ತು ಗದಗ ಜಿಲ್ಲೆಯಲ್ಲಿ ಬಿಸಿ ಗಾಳಿ ಕಾಣಿಸಿಕೊಳ್ಳುವ ಸಂಭವವಿದೆ. ಉಳಿದೆಡೆಯೂ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಬಹುದು ಎಂದು ಇಲಾಖೆ ತಿಳಿಸಿದೆ. 

6 ರಿಂದ ನಾಲ್ಕು ದಿನ ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 7 ರಂದು ಚಿಕ್ಕಮಗಳೂರು, ಹಾಸನ ಹಾಗೂ ತುಮಕೂರಿನಲ್ಲಿಯೂ ಮಳೆಯಾಗುವ ಸಂಭವವಿದೆ. 9ರಂದು ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳು ಸೇರಿ 18 ಜಿಲ್ಲೆಗಳಲ್ಲಿ ಮಳೆಯಾಗಬಹದು ಎಂದು ಮುನ್ಸೂಚನೆ ನೀಡಿದೆ. 

ಬುಧವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಕಲಬುರಗಿಯಲ್ಲಿ ಗರಿಷ್ಠ (42.3 ಡಿಗ್ರಿ ಸೆಲ್ಸಿಯಸ್) ಉಷ್ಣಾಂಶ ವರದಿಯಾಗಿದೆ. ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ತುಮಕೂರಿನಲ್ಲಿಯೂ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT