ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಮಂಗಳವಾರ ಉತ್ತಮ ಮಳೆಯಾಯಿತು. ಜೊಯಿಡಾ ತಾಲ್ಲೂಕಿನ ಗಣೇಶಗುಡಿಯ ಸೂಪಾ ಜಲಾಶಯ ಭರ್ತಿ ಹಂತಕ್ಕೆ ಸಮೀಪಿಸಿರುವುದರಿಂದ ಮೂರು ವರ್ಷದ ಬಳಿಕ 10 ಸಾವಿರ ಕ್ಯುಸೆಕ್ ನೀರು ಕಾಳಿ ನದಿಗೆ ಹರಿಸಲಾಯಿತು.

‘564 ಮೀಟರ್ ನೀರು ಸಂಗ್ರಹಣಾ ಸಾಮರ್ಥ್ಯದ ಜಲಾಶಯದಲ್ಲಿ 559.75 ಮೀಟರ್ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ ಒಳಹರಿವಿನ ಪ್ರಮಾಣ 22,144 ಕ್ಯುಸೆಕ್ ಇತ್ತು. ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಒಳಹರಿವು ಹೆಚ್ಚುವ ಸಾಧ್ಯತೆ ಹಿನ್ನೆಲೆಯಲ್ಲಿ ನೀರು ಹರಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2021ರಲ್ಲಿ ಕೊನೆಯ ಬಾರಿಗೆ ಸೂಪಾ ಜಲಾಶಯದಿಂದ ನೀರು ಹೊರಬಿಡಲಾಗಿತ್ತು. ಕಳೆದ ವರ್ಷ ಮಳೆ ಕೊರತೆಯಿಂದ ಜಲಾಶಯದಲ್ಲಿ ನೀರು ಸಂಗ್ರಹಣೆ ಕಡಿಮೆ ಆಗಿತ್ತು.

ಬಾಗಲಕೋಟೆ ವರದಿ: ಪಶ್ಚಿಮ ಘಟ್ಟ, ಬೆಳಗಾವಿ ಜಿಲ್ಲೆಯಲ್ಲಿ ಮಳೆ ಆಗುತ್ತಿರುವುದರಿಂದ ಘಟಪ್ರಭಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, 11 ಬ್ರಿಡ್ಜ್ ಕಮ್ ಬ್ಯಾರೇಜ್‌ಗಳು ಮುಳುಗಿವೆ. ನದಿಯಲ್ಲಿ 38,281 ಕ್ಯುಸೆಕ್ ನೀರು ಹರಿಯುತ್ತಿದೆ.

‘ಮಲಪ್ರಭಾ ನದಿ ನೀರಿನ ಹರಿವಿನಲ್ಲೂ ಹೆಚ್ಚಳವಾಗಿದೆ. 10,000 ಕ್ಯುಸೆಕ್‌ನಿಂದ 15,000ಕ್ಕೆ ಹೊರ ಹರಿವು ಹೆಚ್ಚುಸುತ್ತಿರುವ ಕಾರಣ ನದಿ ತೀರದ ಜನರು ಎಚ್ಚರದಿಂದ ಇರಬೇಕು’ ಎಂದು ಪ್ರಕಟಣೆ ತಿಳಿಸಿದೆ.

ಮಡಿಕೇರಿ ವರದಿ: ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಭಾಗಮಂಡಲದಲ್ಲಿ 8 ಸೆಂ ಮೀ ಹಾಗೂ ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯಲ್ಲಿ 6, ಪೊನ್ನಂಪೇಟೆ, ಹುದಿಕೇರಿಯಲ್ಲಿ 4 ಸೆಂ.ಮೀ ಬಿರುಸಿನ ಮಳೆಯಾಗಿದೆ. ಮಡಿಕೇರಿ ನಗರದಲ್ಲಿ ದಿನವಿಡೀ ಆಗಾಗ ಬಿಡುವು ನೀಡಿ ಮಳೆ
ಸುರಿಯಿತು.

ಕಲಬುರಗಿ ವರದಿ: ಕಲ್ಯಾಣ ಕರ್ನಾಟಕದ ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಮಂಗಳವಾರ ಉತ್ತಮ ಮಳೆಯಾಗಿದೆ.

ಕಲಬುರಗಿ ನಗರದಲ್ಲಿ ಸಂಜೆ ಕೆಲ ಕಾಲ ಬಿರುಸಿನ ಮಳೆಯಾಗಿದ್ದ ರಿಂದ ರಸ್ತೆಗಳಲ್ಲಿ ನೀರು ಹರಿಯಿತು. ನಗರದ ವಾತಾವರಣ ತಂಪಾಯಿತು. ಅಫಜಲಪುರ, ಕಮಲಾಪುರ, ಕಾಳಗಿ, ಚಿತ್ತಾಪುರ, ಶಹಾಬಾದ್, ಸೇಡಂ ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ.

ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸುತ್ತಿರುವುದರಿಂದ ಅಫಜಲಪುರ ತಾಲ್ಲೂಕಿನಾದ್ಯಂತ ನದಿ ತುಂಬಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಮಣ್ಣೂರ ಗ್ರಾಮದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಎಲ್ಲಮ್ಮದೇವಿ ದೇವಸ್ಥಾನದ ಸುತ್ತ ನೀರು ಆವರಿಸಿಕೊಂಡಿದೆ.

4 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧೆಡೆ ಬುಧವಾರದಿಂದ ನಾಲ್ಕು ದಿನಗಳವರೆಗೆ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಬುಧವಾರ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಬೆಳಗಾವಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.ಉತ್ತರ ಒಳನಾಡಿನ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಮಳೆಯ ಜತೆಗೆ ವೇಗವಾಗಿ ಗಾಳಿ ಬೀಸುವುದರಿಂದ ಮೀನುಗಾರರು ಎಚ್ಚರ ವಹಿಸಬೇಕು. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.