ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Karnataka Rains: ಮುಂದಿನ ಐದು ದಿನ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ

Published 9 ಜೂನ್ 2024, 14:46 IST
Last Updated 9 ಜೂನ್ 2024, 14:46 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧೆಡೆ ಮುಂದಿನ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ಗದಗ ಹಾಗೂ ಕೊಪ್ಪಳ ಜಿಲ್ಲೆಗೆ ಸೋಮವಾರ ‘ರೆಡ್ ಅಲರ್ಟ್’ ಘೋಷಿಸಿದೆ.

ವಿಜಯಪುರ, ಬಾಗಲಕೋಟೆ, ಬಳ್ಳಾರಿ, ಹಾವೇರಿ, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಂಭವವಿದೆ. ರಾಯಚೂರು, ದಾವಣಗೆರೆ, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. 

ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆ ಜತೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಗಾಳಿಯು 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು ಎಂದು ಇಲಾಖೆ ಹೇಳಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ಮಂಗಳವಾರವು ಹಲವು ಜಿಲ್ಲೆಗಳಿಗೆ ಭಾರಿ ಮಳೆಯ ಅಲರ್ಟ್ ನೀಡಲಾಗಿದೆ. ಹಾವೇರಿ, ಕೊಪ್ಪಳ ಹಾಗೂ ಗದಗಕ್ಕೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. 14ರವರೆಗೂ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆಯಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT