ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದ ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’: ಮೀನುಗಾರರಿಗೆ ಎಚ್ಚರಿಕೆ

Published 21 ಮೇ 2024, 15:36 IST
Last Updated 21 ಮೇ 2024, 15:36 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧೆಡೆ ಬುಧವಾರವೂ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. 

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಕೊಡಗು ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳ ಜತೆಗೆ ಶಿವಮೊಗ್ಗ ಜಿಲ್ಲೆಯ ಒಂದೆರಡು ಸ್ಥಳದಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. 

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಯ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. 

ಮೀನುಗಾರರಿಗೆ ಎಚ್ಚರಿಕೆ: ರಾಜ್ಯದ ಹಲವು ಸ್ಥಳಗಳಲ್ಲಿ ಬುಧವಾರ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಕರಾವಳಿಯಲ್ಲಿ ಬಿರುಗಾಳಿಯ  ಸಾಧ್ಯತೆಯೊಂದಿಗೆ, ಗಾಳಿಯು 55 ಕಿ.ಮೀ. ವೇಗದಲ್ಲಿ ಬೀಸಬಹುದು. ಇದರಿಂದಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಕೆ ನೀಡಿದೆ. 

ಇದೇ 23ರಿಂದ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದೆ. 28ರವರೆಗೂ ರಾಜ್ಯದ ವಿವಿಧೆಡೆ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ. 

ಧರ್ಮಸ್ಥಳದಲ್ಲಿ 15 ಸೆಂ.ಮೀ. ಮಳೆ

ಮಂಗಳವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ
ಧರ್ಮಸ್ಥಳದಲ್ಲಿ ಗರಿಷ್ಠ (15 ಸೆಂ.ಮೀ.) ಮಳೆಯಾಗಿದೆ. 

ಉತ್ತರ ಕನ್ನಡದ ಯಲ್ಲಾಪುರ ಹಾಗೂ ಚಾಮರಾಜನಗರದಲ್ಲಿ ತಲಾ 10 ಸೆಂ.ಮೀ., ದಾವಣಗೆರೆಯ ಸಂತೆಬೆನ್ನೂರಿನಲ್ಲಿ 8 ಸೆಂ.ಮೀ., ದಕ್ಷಿಣ ಕನ್ನಡದ ಉಪ್ಪಿನಂಗಡಿ, ಪಣಂಬೂರು, ಮಂಗಳೂರು ವಿಮಾನ ನಿಲ್ದಾಣ, ಗದಗದ ಲಕ್ಷ್ಮೇಶ್ವರ, ಚಿಕ್ಕಮಗಳೂರಿನ ಕೊಪ್ಪ ಹಾಗೂ ಶಿವಮೊಗ್ಗದ ಹುಂಚದಕಟ್ಟೆಯಲ್ಲಿ ತಲಾ 7 ಸೆಂ.ಮೀ. ಮಳೆಯಾಗಿದೆ. ಇನ್ನುಳಿದೆಡೆ ಇದಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಸುರಿದಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT