ಬೆಂಗಳೂರು: ಇರಾನ್ ಮೇಲೆ ಅಮೆರಿಕ–ಇಸ್ರೇಲ್ ನಡೆಸಿದ ದಾಳಿ ಬಳಿಕ ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಉಂಟಾಗಿರುವ ಉದ್ವಿಗ್ನತೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಕನ್ನಡಿಗರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಪ್ರಸ್ತುತ ಸುಮಾರು 100 ಮಂದಿ ಕನ್ನಡಿಗರು ದುಬೈನಲ್ಲಿ (ಯುಎಇ) ಮತ್ತು 9 ಮಂದಿ ಬಹ್ರೇನ್ನಲ್ಲಿ ಸಿಲುಕಿಕೊಂಡಿದ್ದಾರೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (ಎಸ್ಇಒಸಿ) ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಗಳು (ಡಿಇಒಸಿ) 24x7 ಸಕ್ರಿಯಗೊಂಡಿವೆ. ನಾವು ವಿದೇಶಾಂಗ ಸಚಿವಾಲಯ, ನಾಗರಿಕ ವಿಮಾನಯಾನ ಸಚಿವಾಲಯ, ಭಾರತೀಯ ರಾಯಭಾರ ಕಚೇರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.
.ಐದು ಪಾಲಿಕೆಗಳ ಚುನಾವಣೆ: ಜೆಡಿಎಸ್ ಸಮಿತಿ ಅಸ್ತಿತ್ವಕ್ಕೆ.ಆದಿಚುಂಚನಗಿರಿ ಜಾತ್ರೆ: ಚುಂಚಶ್ರೀಗಳ ಜ್ವಾಲಾಪೀಠಾರೋಹಣದ ಸಂಭ್ರಮ .
ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ನೆರವು ಕೋರಿ ಮುಖ್ಯ ಕಾರ್ಯದರ್ಶಿ ಭಾರತ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಸಂಘರ್ಷ ಪೀಡಿತ ಪ್ರದೇಶದಲ್ಲಿರುವ ಸಹೋದರ ಸಹೋದರಿಯರಿಗೆ, ದಯವಿಟ್ಟು ಶಾಂತವಾಗಿರಿ. ಸ್ಥಳೀಯ ಅಧಿಕಾರಿಗಳು ಮತ್ತು ಭಾರತೀಯ ರಾಯಭಾರ ಕಚೇರಿಗಳು ನೀಡುವ ಸಲಹೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ. ಸಹಾಯವಾಣಿ ಸಂಖ್ಯೆಗಳ ಮೂಲಕ ಸಂಬಂಧಪಟ್ಟ ರಾಯಭಾರ ಕಚೇರಿಯಲ್ಲಿ ನೋಂದಾಯಿಸಿ. ರಾಜ್ಯದ ಅಧಿಕಾರಿಗಳು ನಿಮ್ಮ ವಿವರಗಳನ್ನು ಸಂಗ್ರಹಿಸುತ್ತಾರೆ ಹಾಗೂ ಬೆಂಬಲವನ್ನು ನೀಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ಸರ್ಕಾರ ನಿಮ್ಮೊಂದಿಗೆ ದೃಢವಾಗಿ ನಿಲ್ಲುತ್ತದೆ. ನಿಮ್ಮನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
.ಮಲ್ಲಿಕಾರ್ಜುನ ಮುತ್ಯಾ ಬೆಂಬಲಿಸಿ ಬೀದಿಗಿಳಿದ ಕೋಲಿ ಕಬ್ಬಲಿಗ ಸಮುದಾಯದ ಜನ .T20 World Cup: ಸಂಜು ಸ್ಯಾಮ್ಸನ್ಗಾಗಿ ನಾನು ನೋವು ಅನುಭವಿಸಿದ್ದೆ ಎಂದ ಕೈ ಸಂಸದ.ಕೇತುಗ್ರಸ್ತ ಮಹಾ ಚಂದ್ರಗ್ರಹಣ; ಮೇಷ ರಾಶಿಯವರ ಮೇಲೆ ಇದರ ಪರಿಣಾಮ.ವಯನಾಡ್ ಸಂತ್ರಸ್ತರಿಗೆ ಸರ್ಕಾರ ನೀಡಿದ ಮನೆಯಲ್ಲಿ ಇವೆ ಆಧುನಿಕ ಸೌಲಭ್ಯಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.