ಬೆಂಗಳೂರು: ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳ ಅವಧಿಯಲ್ಲಿ ನಡೆಯಲಿರು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತಾರಾ ಪ್ರಚಾರಕರ ಪಟ್ಟಿಯಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪಶ್ಚಿಮ ಬಂಗಾಳ ಚುನಾವಣೆಯ ಉಸ್ತುವಾರಿಗಳಲ್ಲಿ ಒಬ್ಬರಾದ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರಿಗೆ ಸ್ಥಾನ ನೀಡಲಾಗಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸೇರಿದಂತೆ 30 ಜನ ತಾರಾ ಪ್ರಚಾರಕರ ಪಟ್ಟಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೇಂದ್ರ ಚುನಾವಣಾ ಆಯೋಗದ ಕಾರ್ಯದರ್ಶಿಗೆ ಶುಕ್ರವಾರ ಸಲ್ಲಿಸಿದ್ದಾರೆ. ಖರ್ಗೆ ಅವರು ಕಾಂಗ್ರೆಸ್ ತಾರಾ ಪ್ರಚಾರಕರ ಪಟ್ಟಿಯ ಐದನೇ ಸ್ಥಾನದಲ್ಲಿದ್ದರೆ, ಹರಿಪ್ರಸಾದ್ ಹೆಸರು 11ನೇ ಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.