ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಮೀನುಗಾರರಿಗೆ ಎಚ್ಚರಿಕೆ

Published 7 ಜೂನ್ 2024, 15:20 IST
Last Updated 7 ಜೂನ್ 2024, 15:20 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಹಲವೆಡೆ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಐದು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಹನ್ನೆರಡು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. 

ಚಂಡಮಾರುತದ ವಾತಾವರಣವು ಕರಾವಳಿ ಉದ್ದಕ್ಕೂ ಮೇಲುಗೈ ಸಾಧಿಸಿದ್ದು, ಗಾಳಿಯು 45ರಿಂದ 65 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಮುನ್ಸೂಚನೆ ನೀಡಿದೆ. 

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ. ಕೆಲವೊಮ್ಮೆ ಬಿರುಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ಇದೇ 11ರವರೆಗೂ ರಾಜ್ಯದ ಕರಾವಳಿಯ ಹಲವೆಡೆ ಹಾಗೂ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT