ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸಿಎಂ ಸ್ಥಾನ ಕೇಳುವುದು ಏನಿದೆ. ನನಗೆ ಕೊಡಲೇಬೇಕು– ಜಿ. ಪರಮೇಶ್ವರ

Published 18 ಮೇ 2023, 6:44 IST
Last Updated 18 ಮೇ 2023, 6:44 IST
ಅಕ್ಷರ ಗಾತ್ರ

ಬೆಂಗಳೂರು: ‘ಉಪ ಮುಖ್ಯಮಂತ್ರಿ (ಡಿಸಿಎಂ) ಸ್ಥಾನ ಕೇಳುವುದು ಏನಿದೆ? ನನಗೆ ಕೊಡಲೇಬೇಕು’ ಎಂದು ಕಾಂಗ್ರೆಸ್‌ ಹಿರಿಯ ನಾಯಕ, ಶಾಸಕ ಜಿ. ಪರಮೇಶ್ವರ ಬೇಡಿಕೆ ಇಟ್ಟಿದ್ದಾರೆ.

ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಗುರುವಾರ ಬೆಳಿಗ್ಗೆ ಮಾತನಾಡಿದ ಅವರು, ‘ಅಧಿಕೃತವಾಗಿ ಡಿಸಿಎಂ ಸ್ಥಾನ ಬರಬೇಕಿದೆ. ಪಕ್ಷ ಅಧಿಕಾರಕ್ಕೆ ಬರಲು ಎಲ್ಲರೂ ಕೊಡುಗೆ ನೀಡಿದ್ದಾರೆ. ಒಬ್ಬರೇ ಉಪ ಮುಖ್ಯಮಂತ್ರಿ ಆಗಿರಬೇಕು ಎಂದು ಹೇಳಲು ಬರುವುದಿಲ್ಲ‘ ಎಂದರು.

‘ಶಿವಕುಮಾರ್ ಅವರು ಅವರ ಅಭಿಪ್ರಾಯ ಹೇಳಿರುತ್ತಾರೆ. ಎಲ್ಲರೂ ಒಟ್ಟಿಗೆ ಇದ್ದೇವೆ. ಎಲ್ಲರೂ ಸೇರಿ ಅಧಿಕಾರ ನಡೆಸುತ್ತೇವೆ’ ಎಂದರು.

‘ಸರ್ಕಾರದಲ್ಲಿ ದಲಿತರ ಪ್ರಾತಿನಿಧ್ಯ ಹೇಗಿರಲಿದೆ ಎಂದು ನೋಡಬೇಕಿದೆ. ಪರಿಶಿಷ್ಟರಿಗೆ ಮೀಸಲಾದ ಒಟ್ಟು 51 ಕ್ಷೇತ್ರಗಳ ಪೈಕಿ 37ರಲ್ಲಿ ಪಕ್ಷದಿಂದ ಸ್ಪರ್ಧಿಸಿದವರು ಗೆದ್ದಿದ್ದೇವೆ. ಬೇರೆ ಕ್ಷೇತ್ರಗಳಲ್ಲೂ ದಲಿತ ಸಮುದಾಯದ ಮತಗಳು ಫಲಿತಾಂಶದ ಮೇಲೆ ಪರಿಣಾಮ ಬೀರಿವೆ’ ಎಂದರು.

‘ನಾವು ಶಿಸ್ತಿನ ಸಿಪಾಯಿಗಳು. ಲಾಬಿ, ಹೋರಾಟ ಮಾಡಲ್ಲ. ಆದರೆ, ಅವರು (ಹೈಕಮಾಂಡ್‌) ಅರ್ಥ ಮಾಡಿಕೊಳ್ಳಬೇಕು. ಯಾವ ಸಮುದಾಯದ ಬೆಂಬಲ ದೊರಕಿದೆ ಎಂದು. ರಾಜಸ್ಥಾನದ ರೀತಿ ಇಲ್ಲಿ ಆಗಲು ಬಿಡಲ್ಲ. ಸರ್ಕಾರ ಒಳ್ಳೆಯ ಆಡಳಿತ ನೀಡುವ ನೀರೀಕ್ಷೆ ಜನರಲ್ಲಿದೆ’ ಎಂದೂ ಹೇಳಿದರು.

‘ಕೆಪಿಸಿಸಿ ಅಧ್ಯಕ್ಷರು ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ವೀಕ್ಷಕರು ಬಂದು ಶಾಸಕಾಂಗ ಪಕ್ಷದ ನಾಯಕ ಹೆಸರು ಘೋಷಿಸುತ್ತಾರೆ‘ ಎಂದೂ ಪರಮೇಶ್ವರ ಹೇಳಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT