ದಾವಣಗೆರೆ: ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾಡುತ್ತಿರುವ ಆರೋಪ ಸರಿಯಲ್ಲ. ಅವರು ತಪ್ಪು ಮಾಡುತ್ತಿದ್ದಾರೆ ಎಂಬುದನ್ನು ಹೇಳಲು ಸಭೆ ಸೇರಿದ್ದೇವೆ ಎಂದು ಮಾಜಿ ಸಚಿವ ಸೋಮಶೇಖರ ರೆಡ್ಡಿ ತಿಳಿಸಿದರು.

‘ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ವಿಮರ್ಶೆ ಮಾಡುವುದು ಬಿಟ್ಟು ಸ್ವಪಕ್ಷೀಯ ನಾಯಕರ ವಿರುದ್ಧ ಬಹಿರಂಗ ಆರೋಪ ಮಾಡುತ್ತಿದ್ದಾರೆ. ಇದರಿಂದ ಪಕ್ಷದ ಕಾರ್ಯಕರ್ತರು ಹಾಗೂ ಹಿತೈಷಿಗಳು ಮುಜುಗರಕ್ಕೆ ಒಳಗಾಗುವಂತೆ ಆಗಿದೆ. ಅಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗೆ ಇಳಿಸಲು ಸಾಧ್ಯವೇ ಇಲ್ಲ. ಚುನಾವಣೆ ವರೆಗೂ ಅವರೇ ಮುಂದುವರಿಯಲಿದ್ದಾರೆ’ ಎಂದು ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿದರು.

‘ಪಕ್ಷದ ಬೆಳವಣಿಗೆಯ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡುವ ಕುರಿತು ಚರ್ಚೆ ಮಾಡಲಿದ್ದೇವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.