ಬೆಂಗಳೂರು: ದ್ವಿಚಕ್ರ ವಾಹನಗಳ ವ್ಹೀಲಿ ಹಾವಳಿಗೆ ಸಂಪೂರ್ಣ ಇತಿಶ್ರೀ ಹಾಡಲು ಕಾನೂನಿಗೆ ಅಗತ್ಯ ತಿದ್ದುಪಡಿ ತರಬೇಕು ಎಂದು ರಾಜಾಜಿನಗರ ಶಾಸಕ ಎಸ್.ಸುರೇಶ್ಕುಮಾರ್ ಅವರು ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ದ್ವಿಚಕ್ರ ವಾಹನಗಳ ವ್ಹೀಲಿ ಹಾವಳಿಯ ಬಗ್ಗೆ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಕುರಿತು ಅಗತ್ಯ ಕಾನೂನು ರೂಪಿಸಬೇಕು ಎಂದು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಹೈಕೋರ್ಟ್ನ ಈ ಕಳಕಳಿ ಸಮಾಜದ ಎಲ್ಲ ಪ್ರಜ್ಞಾವಂತರ ಭಾವನೆಯನ್ನು ಪ್ರತಿಧ್ವನಿಸಿದೆ ಎಂದು ಅವರು ತಿಳಿಸಿದ್ದಾರೆ.

‘ವ್ಹೀಲಿ ಎಂಬುದು ಒಂದು ಹುಚ್ಚಾಟವಾಗಿದ್ದು, ಇದರಿಂದ ವ್ಹೀಲಿ ಮಾಡುವ ವ್ಯಕ್ತಿಗಳಲ್ಲದೆ, ಅಮಾಯಕ ಸಾರ್ವಜನಿಕರೂ ಬಲಿಯಾಗುತ್ತಿದ್ದಾರೆ. ಕಾನೂನಿನ ಭಯವಿಲ್ಲದೆ, ಅನ್ಯರ ಬಗ್ಗೆ ಕಾಳಜಿ ಇಲ್ಲದೆ ಬಹಳಷ್ಟು ಸಲ ಪುಂಡಪೋಕರಿಗಳು ಮಾಡುತ್ತಿರುವ ಈ ಘನ ಕಾರ್ಯ ಸಮಾಜಕ್ಕೆ ಅಪಾಯಕಾರಿ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.