ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಜಪಾನ್‌ಗೆ ಹೋದಾಗೆಲ್ಲಾ ಭಾರತದಲ್ಲಿ ನೋಟು ಬ್ಯಾನ್: ಮಲ್ಲಿಕಾರ್ಜುನ ಖರ್ಗೆ

Published 20 ಮೇ 2023, 9:26 IST
Last Updated 20 ಮೇ 2023, 9:26 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜಪಾನ್‌ಗೆ ಹೋದಾಗೆಲ್ಲಾ ಭಾರತದಲ್ಲಿ ನೋಟು ಬ್ಯಾನ್ ಹೇರುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದರು.

ಈ ವೇಳೆ ಭಾಷಣ ಮಾಡಿದ ಖರ್ಗೆ, ಕಳೆದ ಬಾರಿ ಪ್ರಧಾನಿ ಮೋದಿ ಜಪಾನ್‌ಗೆ ಹೋಗಿದ್ದಾಗ ಒಂದು ಸಾವಿರ ಮುಖಬೆಲೆಯ ನೋಟನ್ನು ನಿಷೇಧಿಸಿದರು. ಈ ಬಾರಿ ಎರಡು ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದಕ್ಕೆ ಪಡೆದಿದ್ದಾರೆ ಎಂದು ಹೇಳಿದ್ದಾರೆ.

ಇಂತಹ ನೀತಿಗಳಿಂದ ದೇಶಕ್ಕೆ ಪ್ರಯೋಜನವಾಗುವುದಿಲ್ಲ. ಬದಲಿಗೆ ನಷ್ಟವಾಗುತ್ತದೆ. ಪ್ರಧಾನಿ ಮೋದಿ ದೇಶದ ಜನರಿಗೆ ಒಂದಲ್ಲ ಒಂದು ರೀತಿಯಲ್ಲಿ ತೊಂದರೆ ಕೊಡಲು ಬಯಸುತ್ತಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಜನತೆಗೆ ನೀಡಿದ ಭರವಸೆಗಳನ್ನು ಸಿದ್ದರಾಮಯ್ಯ ಸರ್ಕಾರ ಈಡೇರಿಸಲಿದೆ. ಎಲ್ಲರನ್ನು ಒಗ್ಗೂಡಿಸಿ ಸರ್ಕಾರ ಮುನ್ನಡೆಯಲಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT